Railway Recruitment : 10ನೇ ತರಗತಿ ಪಾಸಾದವರಿಗೆ : 21,997 ಉದ್ಯೋಗಗಳು!

Railway Recruitment

Railway Recruitment : ನಮಸ್ಕಾರ ಸ್ನೇಹಿತರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ರೈಲ್ವೆ ನೇಮಕಾತಿ ಮಂಡಳಿ (Railway Recruitment)ಯು 2026 ರಲ್ಲಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ನೀವು ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

RRB Recruitment 2026 in Kannada

RRB ಗ್ರೂಪ್ D ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 02-03-2026 ಎಂದು ನಿಗದಿಪಡಿಸಲಾಗಿದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ, ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಬಗ್ಗೆ ಗೊಂದಲಗಳಿದ್ದರೆ, ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಿಮ್ಮ ಗೊಂದಲವನ್ನು ನಿವಾರಿಸಿಕೊಳ್ಳಿ. ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡ ಹೆಲ್ಪ್ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಿ.

ಹುದ್ದೆಯ ವಿಮರ್ಶೆ:

ಸಂಸ್ಥೆಯ ಹೆಸರು ರೈಲ್ವೆ ನೇಮಕಾತಿ ಮಂಡಳಿ (Railway Recruitment)
ಹುದ್ದೆಯ ಹೆಸರುಗ್ರೂಪ್ D ಸಹಾಯಕ ಹುದ್ದೆಗಳ ನೇಮಕಾತಿ
ಹುದ್ದೆಯ ಸಂಖ್ಯೆ21997
ಹುದ್ದೆಯ ಸ್ಥಳ ಅಖಿಲ ಭಾರತ
ಅರ್ಹತೆ10th ಪಾಸ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02-03-2026
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ವಿಶ್ಲೇಷಣೆ:

ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 21,997 ಗ್ರೂಪ್ D ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, 18 ರಿಂದ 33 ವರ್ಷ ವಯೋಮಿತಿ ಹೊಂದಿರುವ SSLC, ITI ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈ ಹುದ್ದೆಯು ಭಾರತದಾದ್ಯಂತ ಇರುವ 21 ರೈಲ್ವೆ ನೇಮಕಾತಿ ಮಂಡಳಿ (Railway Recruitment)ಯ ವಲಯಗಳಲ್ಲಿ ಹಂಚಿಕೆಯಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ:

ಹುದ್ದೆಯ ವಿವರ ಒಟ್ಟು ಹುದ್ದೆಗಳು
ಪಾಯಿಂಟ್ಸ್ ಮನ್ 376 ಹುದ್ದೆಗಳು
ಸಹಾಯಕ (ವಿದ್ಯುತ್)1,344 ಹುದ್ದೆಗಳು
ಸಹಾಯಕ (ಇಂಜಿನಿಯರ್) 1,993 ಹುದ್ದೆಗಳು
ಸಹಾಯಕ (ವಿಜ್ಞಾನ ಮತ್ತು ತಂತ್ರಜ್ಞಾನ)2,020 ಹುದ್ದೆಗಳು
ಸಹಾಯಕ (ಯಾಂತ್ರಿಕ)3,077 ಹುದ್ದೆಗಳು
ಟ್ರ್ಯಾಕ್ ಮೇಂಟೇನರ್ ಗ್ರೇಡ್-IV13,187 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

RRB ಗ್ರೂಪ್ D (Railway Recruitment) ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಲ್ಲಿ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ITI ಪೂರ್ಣಗೊಳಿಸಿರಬೇಕು.

ವಿಶೇಷ ಸೂಚನೆ: “ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವರೆಗೂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ”

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 01-01-2026 ರಂತೆ,

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 33 ವರ್ಷಗಳು ಇರಬೇಕು.

ವಯಸ್ಸಿನ ಸಡಿಲಿಕೆ:

ಕೆಲವು ವರ್ಗಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ, ಅದನ್ನು ಈ ಕೆಳಗೆ ನೋಡಬಹುದಾಗಿದೆ,

  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷಗಳು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷಗಳು
  • ಪಿಡಬ್ಲ್ಯೂಬಿಡಿ (ಯುಆರ್/ ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ: 10 ವರ್ಷಗಳು
  • ಪಿಡಬ್ಲ್ಯೂಬಿಡಿ (OBC) ಅಭ್ಯರ್ಥಿಗಳಿಗೆ : 13 ವರ್ಷಗಳು
  • ಪಿಡಬ್ಲ್ಯೂಬಿಡಿ (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು

ವೇತನ ಶ್ರೇಣಿ:

RRB ಗ್ರೂಪ್ D ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಯು ಮಾಸಿಕ ₹18,000 ವೇತನ ಪಡೆಯಲು ಹಾಗೂ ಇದರ ಜೊತೆಗೆ ಇತರ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಇತರ ಹಿಂದುಳಿದ ವರ್ಗ (ಒಬಿಸಿ), ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಮೊದಲ ಹಂತದ ಪರೀಕ್ಷೆಗೆ ಹಾಜರಾದ ನಂತರ ₹400/- ಹಣವನ್ನು ಮರುಪಾವತಿ ಮಾಡಲಾಗುವುದು.
  • ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪಿಡಬ್ಲ್ಯೂಬಿಡಿ, ಮಹಿಳೆಯರು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹250/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಮೊದಲ ಹಂತದ ಪರೀಕ್ಷೆಗೆ ಹಾಜರಾದ ನಂತರ ಸಂಪೂರ್ಣ ಅಂದರೆ ₹250/- ಹಣವನ್ನು ಮರುಪಾವತಿ ಮಾಡಲಾಗುವುದು.

ಪಾವತಿ ಮೋಡ್: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ದೈಹಿಕ ದಕ್ಷತೆ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ಕ್ರಮ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ http://indianrailways.gov.in/ ಗೆ ಭೇಟಿ ನೀಡಿ
  • ವೃತ್ತಿ ವಿಭಾಗವನ್ನು ಕ್ಲಿಕ್ ಮಾಡಿ ಅರ್ಜಿ ಫಾರ್ಮ್ ಓಪನ್ ಆಗುತ್ತದೆ.
  • ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ
  • ನಂತರ ಅರ್ಜಿ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ಹಾಗೂ ಅಗತ್ಯ ವಿವರವನ್ನು ಭರ್ತಿ ಮಾಡಿ
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ನಂತರ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.
  • ನಂತರ ಅರ್ಜಿಯನ್ನು ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.

ಅರ್ಜಿ ಸಲ್ಲಿಸುವ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಈಗಾಗಲೇ ಆರಂಭ ಗೊಂಡಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-03-2026

ಅಧಿಕೃತ ಲಿಂಕುಗಳು:

ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ನುಡಿ:

ರೈಲ್ವೆ ನೇಮಕಾತಿ (Railway Recruitment) ಮಂಡಳಿಯು ಗ್ರೂಪ್ D ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದಲೇ ಆರಂಭಗೊಂಡಿದ್ದು, ಅರ್ಹ ಮತ್ತುಆಸಕ್ತ ಅಭ್ಯರ್ಥಿಗಳು ಇಂದೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ನಂತರದ ದಿನಗಳಲ್ಲಿ ತಾಂತ್ರಿಕ ಸಮಸ್ಯೆಗಲುಂಟಾಗಬಹುದು.


ಇತರೆ ಸರ್ಕಾರಿ ಹುದ್ದೆಗಳ ಲಿಂಕುಗಳು :

Leave a Reply

Your email address will not be published. Required fields are marked *