ನಮಸ್ಕಾರ ರೈತಭಾಂದವರೇ, ನೀವೇನಾದರೂ ಪಿಎಂ ಕಿಸಾನ್ (PM-KISAN) 22 ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ ಎಂದು ಯೋಚಿಸುತ್ತಿದ್ದೀರಾ? ಕೇಂದ್ರ ಸರ್ಕಾರವು ಪಿಎಂ ಕಿಸಾನ್ 22 ನೇ ಕಂತಿನ ಹಣ ಬಿಡುಗಡೆ ಮಾಡುವ ನಿಗದಿತ ದಿನಾಂಕವನ್ನು ಘೋಷಣೆ ಮಾಡಲಾಗಿದೆಯೇ? ಇಲ್ಲವೇ? ಎನ್ನುವ ಕುರಿತು ಗೊಂದಲ ಉಂಟಾಗಿದೆಯಾ?ಹಾಗಿದ್ದರೆ ಈ ಮಾಹಿತಿ ನಿಮಗಾಗಿ.
PM-KISAN information in Kannada
ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಈಗಾಗಲೇ ಅಂದರೆ, ನವೆಂಬರ್ 19, 2025 ರಲ್ಲಿ 21 ನೇ ಕಂತಿನ ಹಣವನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿದೆ. ಆದರೆ ರೈತರು ಇದೀಗ ಪಿಎಂ ಕಿಸಾನ್ 22 ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
ಕೆಲವು ರೈತರ ಬ್ಯಾಂಕ್ ಖಾತೆಗೆ ಯಾಕೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಸಿಗುವ ಹಣ ಜಮಾ ಆಗುತ್ತಿಲ್ಲ? ಇದಕ್ಕೆ ಕಾರಣಗಳೇನು? ಹೇಗೆ ಪರಿಹಾರ ಕಂಡುಕೊಳ್ಳಬಹುದು? ಹಾಗೂ 22 ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ? ಎನ್ನುವ ಕುರಿತು ಈ ಒಂದು ಲೇಖನದ ಮೂಲಕ ಮಾಹಿತಿಯನ್ನು ಪಡೆದುಕೊಳ್ಳೋಣ. ಇನ್ನಷ್ಟು ಹೊಸ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ ಕನ್ನಡಹೆಲ್ಪ್ ಗೆ ಭೇಟಿ ನೀಡಿ.
ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) |
| ಅರ್ಹ ಫಲಾನುಭವಿಗಳು | ರೈತರು |
| ಪಿಎಂ ಕಿಸಾನ್ 21 ನೇ ಕಂತಿನ ಹಣ ಬಿಡುಗಡೆ ಮಾಡಲಾದ ದಿನಾಂಕ | ನವೆಂಬರ್ 19, 2025 |
| ಪಿಎಂ ಕಿಸಾನ್ 22 ನೇ ಕಂತಿನ ಹಣ ಬಿಡುಗಡೆ ಮಾಡುವ ದಿನಾಂಕ | ಫೆಬ್ರವರಿ ಕೊನೆಯ ವಾರ ಅಥವಾ ಮಾರ್ಚ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ |
| ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ರೈತರಿಗೆ ಸಿಗುವ ಒಟ್ಟು ಸಹಾಯಧನ | ವರ್ಷಕ್ಕೆ ₹6,000 |
ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) ಯು ಕೇಂದ್ರ ಸರ್ಕಾರ ಜಾರಿಗೊಳಿಸಿದ ಭವ್ಯ ಯೋಜನೆಯಾಗಿದ್ದು, ಈ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಪ್ರತಿ ವರ್ಷಕ್ಕೆ 3 ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ ₹2,000 ದಂತೆ ವರ್ಷಕ್ಕೆ ₹6,000 ದ ವರೆಗೆ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.
ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಈಗಾಗಲೇ 21 ಕಂತುಗಳ ಹಣವನ್ನು ಬಿಡುಗಡೆ ಮಾಡಿದ್ದು, ಇಲ್ಲಿಯ ವರೆಗೆ ಒಟ್ಟು ₹42,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಇದರಿಂದಾಗಿ ರೈತರಿಗೆ ತಮ್ಮ ಕೃಷಿ ಚಟುವಟಿಕೆಗೆ ಅಗತ್ಯವಾದ ಬೀಜ, ಗೊಬ್ಬರ ಹಾಗೂ ಇತರೆ ಕೃಷಿ ಸಂಬಂಧಿತ ವೆಚ್ಚವನ್ನು ಭರಿಸಲು ಸಹಾಯವಾಗಿದೆ.
ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 22 ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 22 ನೇ ಕಂತಿನ ಹಣ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎನ್ನುವುದರ ಕುರಿತು ಕೇಂದ್ರ ಸರ್ಕಾರವು ಅಧಿಕೃತ ದಿನಾಂಕವನ್ನು ನಿಗದಿಪಡಿಸಿಲ್ಲ. ಆದರೆ ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ ಪಿಎಂ ಕಿಸಾನ್ ವಿವಿಧ ಕಂತುಗಳ ಹಣವನ್ನು ಬಿಡುಗಡೆ ಮಾಡುವುದರಿಂದ ಈ ಹಿಂದೆ ನವೆಂಬರ್ ಅಲ್ಲಿ 21 ನೇ ಕಂತಿನ ಹಣ ಬಿಡುಗಡೆ ಮಾಡಿರುವುದರಿಂದ ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ತಿಂಗಳಲ್ಲಿ 22 ನೇ ಕಂತಿನ ಹಣ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ ವಿವಿಧ ಕಂತುಗಳ ಹಣ ಜಮಾ ಆಗದಿರಲು ಕಾರಣವೇನು?
ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ ವಿವಿಧ ಕಂತುಗಳ ಹಣ ಜಮಾ ಆಗದಿರಲು ಸಾಕಷ್ಟು ಕಾರಣಗಳಿವೆ, ಅವುಗಳನ್ನು ಒಂದೊಂದಾಗಿ ಈ ಕೆಳೆಗೆ ತಿಳಿಸುತ್ತ ಹೋಗೋತ್ತೇನೆ.
- e-KYC ಪ್ರಕ್ರಿಯೆ ಪೂರ್ಣಗೊಳ್ಳದೆ ಇರುವುದು:
ಸಾಕಷ್ಟು ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಿದರೂ ಕೂಡ ಕೆಲವು ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಸಿಗುವ ವಿವಿಧ ಕಂತುಗಳ ಹಣ ಇನ್ನು ಜಮಾ ಆಗಲಿಲ್ಲ ಇದಕ್ಕೆ ಮುಖ್ಯ ಕಾರಣ e-KYC ಪ್ರಕ್ರಿಯೆ ಪೂರ್ಣಗೊಳ್ಳದೆ ಇರುವುದಾಗಿದೆ.
- ಸರಿಯಾಗಿ ಲ್ಯಾಂಡ್ ಸೀಡಿಂಗ್ ಮಾಡದೇ ಇರುವುದು:
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿರುವ ರೈತರು ತಮ್ಮ ಜಮೀನಿನ ದಾಖಲೆಗಳನ್ನು ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಸರಿಯಾಗಿ ಅಪ್ಡೇಟ್ ಮಾಡದಿದ್ದರೆ ಪಿಎಂ ಕಿಸಾನ್ ವಿವಿಧ ಕಂತುಗಳ ಹಣ ಜಮಾ ಆಗುವುದಿಲ್ಲ.
- ದಾಖಲೆಗಳನ್ನು ತಪ್ಪಾಗಿ ನೀಡಿರುವುದು:
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವ ರೈತರು ತಮ್ಮ ಹೆಸರು, ಬ್ಯಾಂಕ್ ಖಾತೆಯ ವಿವರ ಹಾಗೂ ಇನ್ನಿತರ ವಿವರಗಳನ್ನು ತಪ್ಪಾಗಿ ದಾಖಲಿಸಿದರೂ ಕೂಡ ಪಿಎಂ ಕಿಸಾನ್ ನ ಹಣ ಜಮಾ ಆಗುವುದಿಲ್ಲ.
- ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿರುವುದು:
ರೈತರೇ, ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಸಂಖ್ಯೆ ಲಿಂಕ್ ಆಗದೆ ಇದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ. ಜೊತೆಗೆ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಏನಾದರು ತಾಂತ್ರಿಕ ದೋಷಗಳಿದ್ದರೂ ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ.
| ವಿಶೇಷ ಸೂಚನೆ: “ನೀವೇನಾದರೂ ಸರ್ಕಾರಿ ಉದ್ಯೋಗದಲ್ಲಿದ್ದು ಅಥವಾ ನೀವು ಹೆಚ್ಚಿನ ಆದಾಯ ತೆರಿಗೆಯನ್ನು ಪಾವತಿಸುತ್ತಿದ್ದು ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದು.” |
ಯಾವುದೇ ಅಡೆತಡೆಗಳಿಲ್ಲದೆ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ ಹಣ ಜಮಾ ಆಗಬೇಕಾದರೆ ರೈತರು ಪಾಲಿಸಬೇಕಾದ ವಿವಿಧ ಹಂತಗಳು:
1. ಲ್ಯಾಂಡ್ ಸೀಡಿಂಗ್ ಅನ್ನು ಅಪ್ಡೇಟ್ ಮಾಡುವುದು:
ನಿಮ್ಮ ಲ್ಯಾಂಡ್ ಸೀಡಿಂಗ್ ಸ್ಟೇಟಸ್ ನೋ ಎಂದಿದ್ದರೆ, ನಿಮ್ಮ ಆಧಾರ್ ಕಾರ್ಡ್, ಜಮೀನಿನ ಪಹಣಿ ಹಾಗೂ ಪಿಎಂ ಕಿಸಾನ್ ID ಗಳೊಂದಿಗೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಗ್ರಾಮ ಆಡಳಿತ ಅಧಿಕಾರಿಯನ್ನು ಭೇಟಿ ಮಾಡಿ. ಅಧಿಕಾರಿಗಳು ನಿಮ್ಮ ಭೂ ದಾಖಲೆಗಳನ್ನು ಪರಿಶೀಲಿಸಿ ನಿಮ್ಮ ಲ್ಯಾಂಡ್ ಸೀಡಿಂಗ್ ಸ್ಟೇಟಸ್ ಅನ್ನು ಯಸ್ ಎಂದು ಅಪ್ಡೇಟ್ ಮಾಡುತ್ತಾರೆ. ನಂತರ ನಿಮ್ಮ ಖಾತೆಗೆ ಪಿಎಂ ಕಿಸಾನ್ ಕಂತುಗಳ ಹಣ ಜಮಾ ಆಗುತ್ತದೆ.
2. e-KYC ಪೂರ್ಣಗೊಳಿಸುವುದು:
ನೀವು ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ಮೂಲಕ e-KYC ಪ್ರಕ್ರಿಯೆ ಪೂರ್ಣಗೊಳಿಸಿ.
- ಆನ್ಲೈನ್ ಮೂಲಕ e-KYC ಪ್ರಕ್ರಿಯೆ ಪೂರ್ಣಗೊಳಿಸುವ ವಿಧಾನ:
ನೀವು ಮೊದಲು ಪಿಎಂ ಕಿಸಾನ್ e-KYC ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ. ನಿಮ್ಮ ಆಧಾರ್ ಸಂಖ್ಯೆ ಹಾಗೂ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ನಂತರ ನಿಮಗೆ ಒಟಿಪಿ ಬರುತ್ತದೆ ಅದನ್ನು ನಮೂದಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ e-KYC ಪ್ರಕ್ರಿಯೆ ಪೂರ್ಣಗೊಳಿಸಿ.
3. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ:
ನಿಮ್ಮ ಬ್ಯಾಂಕ್ ಗೆ ಹೋಗಿ ನಿಮ್ಮ ಆಧಾರ್ ಸಂಖ್ಯೆಯು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆಯೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಿ. ನಿಮ್ಮ ಖಾತೆಗೆ ಪಿಎಂ ಕಿಸಾನ್ ನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಬೇಕಾದರೆ ಇದು ಮುಖ್ಯವಾಗಿದೆ.
ಪಿಎಂ ಕಿಸಾನ್ 22 ನೇ ಕಂತಿನ ಹಣ ಸುಲಭವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ:
ಕೇಂದ್ರ ಸರ್ಕಾರವು ಪಿಎಂ ಕಿಸಾನ್ ವಿವಿಧ ಕಂತುಗಳ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದರಿಂದಾಗಿ ರೈತರಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಅಥವಾ ಅವರಿಂದ ಆಗುವ ವಂಚನೆಗಳಿಂದ ಪಾರಾಗಬಹುದು. ಈ ವ್ಯವಸ್ಥೆಯು ಹೆಚ್ಚು ಪಾರದರ್ಶಕವಾಗಿದೆ.
ನಿಮ್ಮ ಬ್ಯಾಂಕ್ ಖಾತೆಗೆ ಹಣ ನೇರ ನಗದು ವರ್ಗಾವಣೆ ಮೂಲಕ ಜಮಾ ಆಗಬೇಕಾದರೆ ಈ ಮೇಲೆ ನೀಡಿರುವ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿಕೊಂಡಿರಬೇಕು.
ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆಯೇ ಎಂದು ಖಚಿತ ಪಡಿಸಿಕೊಳ್ಳುವುದು ಹೇಗೆ?
- ನೀವು ಮೊದಲು ಪಿಎಂ ಕಿಸಾನ್ ಅಧಿಕೃತ ಪೋರ್ಟಲ್ https://pmkisan.gov.in/ ಗೆ ಭೇಟಿ ನೀಡಿ.
- ಬೆನಿಫಿಶಿಯರಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
- ನೋಂದಣಿ ಸಂಖ್ಯೆ ಹಾಗೂ ಫೋನ್ ನಂಬರ್ ಅನ್ನು ನಮೂದಿಸಿ.
- ನಂತರ ಅಲ್ಲಿರುವ ಕ್ಯಾಪ್ಚ ಕೋಡ್ ಅನ್ನು ನಮೂದಿಸಿ.
- ಅಲ್ಲಿ ನಿಮ್ಮ ಕಂತುಗಳ ವಿವರ ಇರುತ್ತದೆ. ಪಿಎಂ ಕಿಸಾನ್ ನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದ್ದರೆ ಪೇಮೆಂಟ್ ಸಕ್ಸಸ್ ಫುಲಿ ಎಂದು ಕಾಣಿಸುತ್ತದೆ.
ಕೊನೆಯ ಮಾತು:
ಕೇಂದ್ರ ಸರ್ಕಾರವು ರೈತರಿಗೆ ಕೃಷಿ ಚಟುವಟಿಗೆ ಅಗತ್ಯವಾದ ಬೀಜಗಳನ್ನು ಹಾಗೂ ಗೊಬ್ಬರಗಳನ್ನು ಕೊಳ್ಳಲು ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಸಹಾಯಧನವನ್ನು ನೀಡುತ್ತಿದ್ದು, ಈಗಾಗಲೇ 21 ಕಂತುಗಳ ಹಣವನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿದೆ. 22 ನೇ ಕಂತಿನ ಹಣವನ್ನು ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ನೀವು ನಿಮ್ಮ ಆಧಾರ್ ಸಂಖ್ಯೆಯು ಬ್ಯಾಂಕ್ ಗೆ ಲಿಂಕ್ ಆಗಿದಿಯಾ? e-KYC ಪ್ರಕ್ರಿಯೆ ಪೂರ್ಣಗೊಂಡಿದೆಯಾ? ಎಂದು ಖಚಿತ ಪಡೆಸಿಕೊಳ್ಳಿ. ಈ ಪ್ರಕ್ರಿಯೆಗಳು ಪೂರ್ಣಗೊಳ್ಳದೆ ಇದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ.
ಪದೇ ಪದೇ ಕೇಳಲಾಗುವ ಪ್ರಶ್ನೆಗೆಳು:
ಪಿಎಂ ಕಿಸಾನ್ 22 ನೇ ಕಂತಿನ ಹಣ ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ತಿಂಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಅರ್ಹ ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ವರ್ಷಕ್ಕೆ ₹6,000 ಸಹಾಯಧನವನ್ನು ಪಡೆದುಕೊಳ್ಳಬಹುದು.
ಹೌದು, e-KYC ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ. ಏಕೆಂದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಬೇಕಾದರೆ ಇದು ಮುಖ್ಯವಾಗಿದೆ.
ಇಲ್ಲ, ಈ ಯೋಜನೆಯು ಕೇವಲ ರೈತರಿಗೆ ಮಾತ್ರ ಸೀಮಿತವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- PMKSY: ನಿಮ್ಮ ಜಮೀನಿಗೆ ಡ್ರಿಪ್ ಮತ್ತು ಸ್ಪ್ರಿಂಕ್ಲರ್ ಅಳವಡಿಸಲು 90% ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ
- ಹೆಣ್ಣುಮಕ್ಕಳ ಭವಿಷ್ಯ ನೋಡಿ! ಸ್ಕೀಮ್ ಮಾಡಿ ಕೇವಲ ರೂ 250/- ಪಾವತಿಸುವ ಮೂಲಕ ₹ 55.43 ಲಕ್ಷ ಪಡೆಯಿರಿ!
- Free Training Skill : ಮಹಿಳೆಯರಿಗೆ 31 ದಿನ ಉಚಿತ ಎಂಬ್ರಾಯ್ಡರಿ ತರಬೇತಿ+ಊಟ+ವಸತಿ
- Labour Card Free Kit : ಲೇಬರ್ ಕಾರ್ಡ್ ಇದ್ದರೆ, ಫ್ರೀ ಟೂಲ್ ಕಿಟ್ ಪಡೆಯಲು ಇಂದೇ ಅರ್ಜಿ ಸಲ್ಲಿಸಿ!
- ‘ಶಕ್ತಿ’ ಯೋಜನೆಗೆ ಡಿಜಿಟಲ್ ಟಚ್ – ಮಹಿಳೆಯರಿಗೆ ಉಚಿತ ಸ್ಮಾರ್ಟ್ಕಾರ್ಡ್! ಅರ್ಜಿ ಸಲ್ಲಿಸೋದು ಹೇಗೆ?

