SBM: ₹20,000/- ಸಹಾಯಧನ ಪಡೆಯಲು ಸುಲಭ ವಿಧಾನ! ನಿಮ್ಮ ಮನೆಯಲ್ಲಿ ಶೌಚಾಲಯ ಇಲ್ಲವೇ? ಹಾಗಿದ್ದರೆ ಇಲ್ಲಿ ಅರ್ಜಿ ಸಲ್ಲಿಸಿ!

Swachh bharat abhiyan in kannada

ನಮಸ್ಕಾರ ಸ್ನೇಹಿತರೆ, ನಿಮ್ಮ ಮನೆಯಲ್ಲಿ ಸರಿಯಾದ ಶೌಚಾಲಯ (SBM) ವ್ಯವಸ್ಥೆ ಇಲ್ಲವೇ? ಶೌಚಾಲಯ ಇಲ್ಲದ ಕಾರಣ ಬಯಲು ಪ್ರದೇಶವನ್ನೇ ಶೌಚಾಲಯವಾಗಿ ಬಳಸುತ್ತಿದ್ದೀರಾ? ಹಾಗಿದ್ದರೆ ಸರ್ಕಾರದ ಕಡೆಯಿಂದ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಸರ್ಕಾರವು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ನಿಮ್ಮ ಮನೆಗೆ ಉತ್ತಮ ಶೌಚಾಲಯವನ್ನು ನಿರ್ಮಿಸಲು ಭಾರಿ ಸಹಾಯಧನವನ್ನು ನೀಡುತ್ತಿದೆ.

SBM : Swachh bharat abhiyan in kannada


ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದೊಂದಿಗೆ ಜಾರಿಯಾದ ಸ್ವಚ್ಛ ಭಾರತ್ ಮಿಷನ್ ಯೋಜನೆಯು (SBM) ಗ್ರಾಮೀಣ ಹಾಗೂ ನಗರ ಭಾಗದ ನಿವಾಸಿಗಳಿಗೆ ತಮ್ಮ ಮನೆಗೆ ಶೌಚಾಲಯವನ್ನು ನಿರ್ಮಿಸಲು ಸಹಾಯಧನವನ್ನು ನೀಡುವ ಮೂಲಕ ಬಯಲು ಮುಕ್ತ ಶೌಚಾಲಯವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಸಾಕಷ್ಟು ನಗರ ಹಾಗೂ ಗ್ರಾಮೀಣ ಪ್ರದೇಶದ ನಿವಾಸಿಗಳು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಈ ಸಹಾಯಧನದಿಂದ ತಮ್ಮ ಮನೆಗಳಲ್ಲಿ ಶೌಚಾಲಯವನ್ನು ನಿರ್ಮಾಣ ಮಾಡಿಕೊಂಡಿದ್ದಾರೆ.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ನೀವು ಕೂಡ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಳ್ಳಬೇಕಾ? ಹಾಗಿದ್ದರೆ, ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು, ಸರ್ಕಾರದಿಂದ ಸಿಗುವ ಒಟ್ಟು ಸಹಾಯಧನ, ಅರ್ಹ ಅಭ್ಯರ್ಥಿಗಳು ಹೀಗೆ ಇನ್ನಷ್ಟು ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಿತರ ಯೋಜನೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡಹೆಲ್ಪ್ ಗೆ ಭೇಟಿ ನೀಡಿ.

SBM

ಯೋಜನೆಯ ವಿವರಣಾತ್ಮಕ ನೋಟ:

ಯೋಜನೆಯ ಹೆಸರು ಸ್ವಚ್ಛ ಭಾರತ್ ಮಿಷನ್ (Swachh Bharat Mission)
ಯೋಜನೆಯಡಿಯಲ್ಲಿ ಸಿಗುವ ಸೌಲಭ್ಯ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ
ಅರ್ಹ ಫಲಾನುಭವಿಗಳು ಗ್ರಾಮೀಣ ಹಾಗೂ ನಗರ ಪ್ರದೇಶದ ನಿವಾಸಿಗಳು
ಒಟ್ಟು ಸಬ್ಸಿಡಿ ಸಹಾಯಧನ ₹20,000
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಸ್ವಚ್ಛ ಭಾರತ್ ಮಿಷನ್ ಯೋಜನೆಯ ಬಗ್ಗೆ:

ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು (SBM) ಮಹಾತ್ಮಾ ಗಾಂಧಿಯವರ 150 ನೇ ಜನ್ಮದಿನಾಚರಣೆಯ ಸವಿ ನೆನಪಿಗಾಗಿ ಜಾರಿಗೊಳಿಸಿದ ಯೋಜನೆಯಾಗಿದ್ದು, ಈ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಂಟಿ ಸಹಭಾಗಿತ್ವದೊಂದಿಗೆ ಜಾರಿಯಾಗಿದೆ. ಈ ಯೋಜನೆಯ ಮೂಲ ಉದ್ದೇಶ ಬಯಲು ಶೌಚ ಮುಕ್ತ ಪ್ರದೇಶವನ್ನಾಗಿ ಮಾಡುವುದಾಗಿದೆ.

ಸರ್ಕಾರವು ಸ್ವಚ್ಛ ಭರತ್ ಮಿಷನ್ (SBM) ಯೋಜನೆಯಡಿಯಲ್ಲಿ ಪ್ರತಿಯೊಂದು ಮನೆಯು ಶೌಚಾಲಯವನ್ನು ಹೊಂದಬೇಕು ಎನ್ನುವ ಉದ್ದೇಶದಿಂದ ಶೌಚಾಲಯ ನಿರ್ಮಾಣಕ್ಕೆ20,000 ರೂ ಸಹಾಯಧನವನ್ನು ನೀಡಲು ಮುಂದಾಗಿದೆ. ಈ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಳ್ಳಬೇಕಾದರೆ ನಿಮ್ಮ ಮನೆಯಲ್ಲಿ ಶೌಚಾಲಯದ ವ್ಯವಸ್ಥೆ ಇರಬಾರದು.

ಸ್ವಚ್ಛ ಭಾರತ್ ಮಿಷನ್ ಯೋಜನೆಯ ಉದ್ದೇಶ:

1. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡುವುದು:

ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಜನರು ಹಣಕಾಸಿನ ಸಮಸ್ಯೆಯಿಂದ ಸ್ವಂತ ಖರ್ಚಿನಲ್ಲಿ ಶೌಚಾಲಯವನ್ನು ನಿರ್ಮಿಸಲು ಸಾಧ್ಯವಾಗದ ಕಾರಣ ಬಯಲು ಶೌಚವನ್ನು ಬಳಸುತ್ತಿದ್ದಾರೆ. ಅಂತಹವರಿಗೆ ಸರ್ಕಾರವು ತಮ್ಮ ಮನೆಯಲ್ಲೇ ಶೌಚಾಲಯವನ್ನು ನಿರ್ಮಿಸಲು ಸಹಾಯಧನವನ್ನು ನೀಡುವ ಮೂಲಕ ಪ್ರತಿ ಮನೆಯು ಶೌಚಾಲಯವನ್ನು ಹೊಂದುವಂತೆ ಮಾಡುವುದು.

2. ಆರೋಗ್ಯ ಸುಧಾರಣೆಗೆ ಒತ್ತು ನೀಡುವುದು:

ಬಯಲು ಶೌಚ ಪದ್ಧತಿಯಿಂದಾಗಿ ಕಾಲರಾ, ಟೈಫಾಯ್ಡ್ ಗಳಂತಹ ಸಾಂಕ್ರಾಮಿಕ ರೋಗಗಳು ಬರುವುದರಿಂದ ಅವುಗಳನ್ನು ನಿರ್ಮೂಲನೆ ಮಾಡಲು ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವ ಮೂಲಕ ಅವರ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒಟ್ಟು ನೀಡಿದೆ.

3. ತಾಜ್ಯ ನಿರ್ವಹಣೆಗೆ ಒತ್ತು ನೀಡುವುದು:

ಸರ್ಕಾರವು ಸ್ವಚ್ಛ ಭಾರತ್ ಮಿಷನ್ (SBM) ಯೋಜನೆಯಡಿಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಘನ ಹಾಗೂ ದ್ರವ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ವಿಂಗಡಿಸಿ, ಈ ಎಲ್ಲಾ ತಾಜ್ಯಗಳನ್ನು ಸಂಸ್ಕರಿಸುವ ವ್ಯವಸ್ಥೆಯನ್ನು ಜಾರಿ ಗೊಳಿಸುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿದೆ.

4. ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದು:

ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ತಮ್ಮ ಗ್ರಾಮ ಹಾಗೂ ನಗರ ಪ್ರದೇಶವನ್ನು ಹೇಗೆ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಎನ್ನುವುದರ ಬಗ್ಗೆ ಅರಿವು ಮೂಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು ಹಾಗೂ ಮಕ್ಕಳಿಗೆ ಶಾಲೆಗಳಲ್ಲಿ ಸ್ವಚ್ಛವಾಗಿ ಕೈ ತೊಳಿಯುವ ವಿಧಾನ, ಕಸವನ್ನು ವಿಂಗಡಣೆ ಮಾಡುವ ಬಗ್ಗೆ ಶಿಕ್ಷಣವನ್ನು ನೀಡುವ ಮೂಲಕ ಸ್ವಚ್ಛತೆ ಏಕೆ ಅಗತ್ಯ ಎನ್ನವ ಬಗ್ಗೆ ಜಾಗೃತಿ ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಮನೆಯಲ್ಲೇ ಸ್ವಂತವಾಗಿ ಶೌಚಾಲಯ ನಿರ್ಮಾಣ ಮಾಡುವುದರಿಂದ ಸಿಗುವ ಪ್ರಯೋಜನಗಳು:

  • ರೋಗಮುಕ್ತ ಗ್ರಾಮ ಮತ್ತು ನಗರ:

ಬಯಲು ಶೌಚ ಪದ್ಧತಿಯಿಂದಾಗಿ ಗ್ರಾಮ ಮತ್ತು ನಗರ ಪದೇಶಗಳಲ್ಲಿ ಹಲವಾರು ಸಾಂಕ್ರಾಮಿಕ ರೋಗಗಳು ಬಂದು ಅಲ್ಲಿನ ಜನರ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಆದರೆ ಗ್ರಾಮ ಹಾಗೂ ನಗರ ಪ್ರದೇಶದ ಜನರು ತಮ್ಮ ಮನೆಗಳಲ್ಲೇ ಸ್ವಂತವಾಗಿ ಶೌಚಾಲಯವನ್ನು ನಿರ್ಮಿಸಿಕೊಳ್ಳುವ ಮೂಲಕ ರೋಗಮುಕ್ತ ಗ್ರಾಮ ಹಾಗೂ ನಗರಗಳಾಗಿ ಮಾರ್ಪಾಡು ಮಾಡಲು ಇದು ನೆರವಾಗುತ್ತದೆ.

  • ವಿವಿಧ ಮಾಲಿನ್ಯಗಳನ್ನು ತಡೆಗಟ್ಟಬಹುದು:

ಗ್ರಾಮ ಹಾಗೂ ನಗರ ಪ್ರದೇಶದ ಜನರು ಬಯಲನ್ನು ಶೌಚಾಲಯವಾಗಿ ಬಳಸುವುದರಿಂದ ಜಲ ಮಾಲಿನ್ಯಗಳು ಹಾಗೂ ನೆಲ ಮಾಲಿನ್ಯಗಳು ಉಂಟಾಗುತ್ತದೆ. ಇದರಿಂದಾಗಿ ಪರಿಸರದ ಮೇಲೆ ಬಾರಿ ಪರಿಣಾಮ ಬೀರುತ್ತದೆ. ಇವುಗಳನ್ನು ನಿರ್ಮೂಲನೆ ಮಾಡಲು ಪ್ರತಿಯೊಂದು ಮನೆಯು ಸ್ವಂತವಾಗಿ ಶೌಚಾಲಯ ವ್ಯವಸ್ಥೆಯನ್ನು ಹೊಂದಲು ಸರ್ಕಾರದಿಂದ ಭಾರಿ ಮೊತ್ತದ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.

  • ಮಹಿಳೆಯರ ಘನತೆ ಹಾಗೂ ಸುರಕ್ಷತೆಯನ್ನು ಕಾಪಾಡುವುದು:

ಸ್ವಚ್ಛ ಭಾರತ್ ಮಿಷನ್ (SBM) ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನವನ್ನು ಪಡೆದುಕೊಳ್ಳುವ ಮೂಲಕ ಶೌಚಾಲಯವಿಲ್ಲದೆ ಮಹಿಳೆಯರು ಅನುಭವಿಸುತ್ತಿದ್ದ ಮುಜುಗರ ಹಾಗೂ ಅಸುರಕ್ಷತೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಮಹಿಳೆಯರು ಘನತೆ ಹಾಗೂ ಗೌರವವನ್ನು ಹೆಚ್ಚಿಸುವುದು.

  • ವೈದ್ಯಕೀಯ ವೆಚ್ಚಗಳಲ್ಲಿ ಉಳಿತಾಯ:

ಗ್ರಾಮೀಣ ಹಾಗೂ ನಗರದ ನಿವಾಸಿಗಳು ತಮ್ಮ ಮನೆಯಲ್ಲೇ ಸ್ವಂತವಾಗಿ ಶೌಚಾಲಯವನ್ನು ಹೊಂದುವ ಮೂಲಕ ಕಾಲರಾ, ಟೈಫಾಯ್ಡ್ ಅತಿಸಾರದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮೂಲಕ ವೈದ್ಯಕೀಯ ವೆಚ್ಚಗಳು ಕಡಿಮೆ ಆಗುತ್ತದೆ. ಇದರಿಂದಾಗಿ ಬಡ ಮತ್ತು ಮಾಧ್ಯಮ ವರ್ಗದ ಜನರು ಸ್ವಲ್ಪಮಟ್ಟಿಗಾದರೂ ಆರ್ಥಿಕವಾಗಿ ಸದೃಢರಾಗಲು ಸಹಾಯವಾಗುತ್ತದೆ.

ತಮ್ಮ ಮನೆಗೆ ಶೌಚಾಲಯವನ್ನು ನಿರ್ಮಾಣ ಮಾಡಲು ಜನರು ಸರ್ಕಾರದಿಂದ ಪಡೆದುಕೊಳ್ಳುವ ಸಹಾಯಧನವೆಷ್ಟು?

ಸರ್ಕಾರವು ಸ್ವಚ್ಛ ಭಾರತ್ ಮಿಷನ್ (SBM) ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ನೀಡುವ ಸಹಾಯಧನವು ವಿವಿಧ ವರ್ಗಗಳ ಮೇಲೆ ಆಧರಿಸಿದೆ. ಅವುಗಳನ್ನು ಈ ಕೆಳಕಂಡಂತೆ ತಿಳಿದುಕೊಳ್ಳುತ್ತ ಹೋಗೋಣ.

  • ಸಾಮಾನ್ಯ ವರ್ಗದ ಫಲಾನುಭವಿಗಳು BPL ಕಾರ್ಡ್ ಹೊಂದಿದ್ದರೆ, ಸರ್ಕಾರದಿಂದ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
  • ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಕ್ಕೆ ಸೇರಿದ ಫಲಾನುಭವಿಗಳು ಶೌಚಾಲಯ ನಿರ್ಮಾಣಕ್ಕೆ ಸಿಗುವ ₹12,000 ಸಹಾಯಧನದ ಜೊತೆಗೆ ರಾಜ್ಯ ಸರ್ಕಾರವು ನೀಡುವ ವಿಶೇಷ ಅನುದಾನವು ಸೇರಿ ಒಟ್ಟು ₹20,000 ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಇಲ್ಲಿ ಗಮನಿಸಿ: “ನೀವೇನಾದರೂ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದರೆ, ಈ ಸಹಾಯಧನವು ಎರಡು ಹಂತಗಳಲ್ಲಿ ನೇರ ನಗದು ವರ್ಗಾವಣೆಯ ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.”

ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು?

  1. ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
  2. ಅರ್ಜಿದಾರರು ಈ ಹಿಂದೆ ಸರ್ಕಾರದಿಂದ ಯಾವುದೇ ರೀತಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಂಡಿರಬಾರದು.
  3. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸ್ವಚ್ಛ ಭರತ್ ಮಿಷನ್ ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಮೊದಲ ಆದ್ಯತೆ ನೀಡಲಾಗುವುದು.
  4. ಅರ್ಜಿದಾರರು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಬೇಕಾದರೆ ತಮ್ಮ ಮನೆಯಲ್ಲಿ ಶೌಚಾಲಯ ವ್ಯವಸ್ಥೆಯನ್ನು ಹೊಂದಿರಬಾರದು.
  5. ಭೂ ರಹಿತ ಕೃಷಿ ಕಾರ್ಮಿಕರು, ದೈಹಿಕ ವಿಕಲಚೇತನರು ಇರುವ ಕುಟುಂಬಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು, ಮಹಿಳಾ ಪ್ರಧಾನ ಕುಟುಂಬಗಳು ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರು APL ಕಾರ್ಡ್ ಹೊಂದಿದ್ದರೂ ಸಹ ಸ್ವಚ್ಛ ಭರತ್ ಮಿಷನ್ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಏನು?

ಸ್ವಚ್ಛ ಭಾರತ್ ಮಿಷನ್ (Swachh Bharat Mission) SBMಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಳ್ಳಬೇಕಾದರೆ ಈ ಎಲ್ಲ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳೇನು ಎನ್ನುವುದನ್ನು ಈ ಕೆಳಗೆ ತಿಳಿದುಕೊಳ್ಳೋಣ.

  • ಅರ್ಜಿದಾರದ ಆಧಾರ್ ಕಾರ್ಡ್
  • ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್
  • ಸಕ್ರಿಯ ಮೊಬೈಲ್ ಸಂಖ್ಯೆ
  • ರೇಷನ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ನಿರ್ಮಾಣ ಹಂತದಲ್ಲಿರುವ ಶೌಚಾಲಯದ ಫೋಟೋ

ಅರ್ಹ ಫಲಾನುಭವಿಗಳು ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು?

ಅರ್ಹ ಫಲಾನುಭವಿಗಳು ಸ್ವಚ್ಛ ಭರತ್ ಮಿಷನ್ (SBM)ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಳ್ಳಬೇಕಾದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ನಗರ ಪದೇಶದ ಜನರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ನಗರ ಪ್ರದೇಶದಲ್ಲಿ ಅರ್ಜಿ ಸಲ್ಲಿಸುವ ಅರ್ಹ ಫಲಾನುಭವಿಗಳು ಸ್ವಚ್ಛ ಭರತ್ ಮಿಷನ್ ಅಧಿಕೃತ ಪೋರ್ಟಲ್ https://sbmurban.org/ ಗೆ ಭೇಟಿ ನೀಡಿ.
  • ಸಿಟಿಜನ್ ರಿಜಿಸ್ಟ್ರೇಷನ್ ವಿಭಾಗವನ್ನು ಆಯ್ಕೆಮಾಡಿ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ನೋಂದಣಿ ಪೂರ್ಣಗೊಳಿಸಿ. ಮೊಬೈಲ್ ಸಂಖ್ಯೆಯೇ ನಿಮ್ಮ ಲಾಗಿನ್ ಐಡಿ ಆಗಿರುತ್ತದೆ.
  • ನಂತರ ಲಾಗಿನ್ ಐಡಿ ಬಳಸಿ ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಪಡೆಯಿರಿ.
  • ಅರ್ಜಿ ನಮೂನೆಯಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ನಿಮ್ಮ ವಾರ್ಡ್ ಸಂಖ್ಯೆಯನ್ನು ಆಯ್ಕೆ ಮಾಡಿ.
  • ನಂತರ, ತಮ್ಮ ಸ್ವ ವಿವರ ಹಾಗೂ ಬ್ಯಾಂಕ್ ವಿವರವನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಗ್ರಾಮೀಣ ಪ್ರದೇಶದ ಜನರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಗ್ರಾಮೀಣ ಪ್ರದೇಶದಲ್ಲಿ ಅರ್ಜಿ ಸಲ್ಲಿಸುವ ಅರ್ಹ ಫಲಾನುಭವಿಗಳು ಸ್ವಚ್ಛ ಭರತ್ ಮಿಷನ್ ಅಧಿಕೃತ ಪೋರ್ಟಲ್ https://swachhbharatmission.ddws.gov.in/ ಗೆ ಭೇಟಿ ನೀಡಿ.
  • ಸಿಟಿಜನ್ ರಿಜಿಸ್ಟ್ರೇಷನ್ ವಿಭಾಗವನ್ನು ಆಯ್ಕೆಮಾಡಿ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ನೋಂದಣಿ ಪೂರ್ಣಗೊಳಿಸಿ. ಮೊಬೈಲ್ ಸಂಖ್ಯೆಯೇ ನಿಮ್ಮ ಲಾಗಿನ್ ಐಡಿ ಆಗಿರುತ್ತದೆ.
  • ನಂತರ ಲಾಗಿನ್ ಐಡಿ ಬಳಸಿ ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಪಡೆಯಿರಿ.
  • ಅರ್ಜಿ ನಮೂನೆಯಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತ್ ಅನ್ನು ಆಯ್ಕೆ ಮಾಡಿ.
  • ನಂತರ, ತಮ್ಮ ಸ್ವ ವಿವರ ಹಾಗೂ ಬ್ಯಾಂಕ್ ವಿವರವನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಗಮನಿಸಬೇಕಾದ ಪ್ರಮುಖ ಅಂಶಗಳು:

  • ಗ್ರಾಮ ಹಾಗೂ ನಗರ ಪ್ರದೇಶದ ನಿವಾಸಿಗಳು ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ ನಂತರ ನಗರ ಪ್ರದೇಶದಲ್ಲಿ ನಗರದ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳು ನಿಮ್ಮ ಮನೆಗೆ ಬಂದು ಶೌಚಾಲಯ ನಿರ್ಮಾಣ ಮಾಡುವ ಸ್ಥಳವನ್ನು ಪರಿಶೀಲನೆ ಮಾಡಲು ಬರುತ್ತಾರೆ.
  • ನಂತರ ನೀವು ಶೌಚಾಲಯ ನಿರ್ಮಾಣ ಮಾಡುವ ವಿವಿಧ ಹಂತಗಳ ಫೋಟೋ ಅನ್ನು ಅಪ್ಲೋಡ್ ಮಾಡಬೇಕಾಗುತ್ತದೆ.

ಕೊನೆಯ ಮಾತು:

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದೊಂದಿಗೆ ಜಾರಿಯಾದ ಸ್ವಚ್ಛ ಭರತ್ ಮಿಷನ್ (SBM೦ ಯೋಜನೆಯು ಎಲ್ಲಾ ಮನೆಗಳು ಸ್ವಂತ ಶೌಚಾಲಯವನ್ನು ಹೊಂದಬೇಕು ಎನ್ನುವ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನವನ್ನು ನೀಡುತ್ತಿದ್ದು, ನೀವು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ. ನಿಮ್ಮ ನೆರೆ ಹೊರೆಯರಿಗೂ ಕೂಡ ಈ ಮಾಹಿತಿಯನ್ನು ತಿಳಿಸಿ ಅವರ ಮನೆಗೆ ಸ್ವಂತ ಶೌಚಾಲಯ ನಿರ್ಮಾಣ ಮಾಡುವಂತೆ ಮಾಡಿ ಸ್ವಚ್ಛ ಭಾರತವನ್ನಾಗಿ ಮಾಡುವ ಕನಸ್ಸಿಗೆ ನಿಮ್ಮದೊಂದು ಸಣ್ಣ ಕೊಡುಗೆ ಇರುವಂತೆ ಮಾಡಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಸರ್ಕಾರದಿಂದ ಶೌಚಾಲಯ ನಿರ್ಮಾಣಕ್ಕೆ ₹20,000 ವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.

ಹೌದು

ಆನ್ಲೈನ್ ಮೂಲಕ

ನೇರ ನಗದು ವರ್ಗಾವಣೆ ಮೂಲಕ ಹಣ ಜಮಾ ಆಗುತ್ತದೆ.


ಇತರೆ ಪ್ರಮುಖ ಲಿಂಕುಗಳು:

Leave a Reply

Your email address will not be published. Required fields are marked *