ನಮಸ್ಕಾರ ಸ್ನೇಹಿತರೆ, ನೀವೇನಾದರೂ ಡಿಪ್ಲೋಮಾ ಅಥವಾ ಇಂಜಿನಿಯರ್ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಬಂಪರ್ ಗುಡ್ ನ್ಯೂಸ್! ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನೀಯರಿಗೆ ಭಾರೀ ಮೊತ್ತದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.
Schneider Scholarship in Kannada
ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನೀಯರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ವಿದ್ಯಾರ್ಥಿವೇತನ (Schneider Scholarship) ವನ್ನು ನೀಡಲು ಮುಂದಾಗಿದ್ದು, ಅರ್ಹ ವಿದ್ಯಾರ್ಥಿನೀಯರು ಈ ವಿದ್ಯಾರ್ಥಿವೇತನದಡಿಯಲ್ಲಿ ಪ್ರತಿ ಶೈಕ್ಷಣಿಕ ವರ್ಷಕ್ಕೆ ₹50,000 ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ.
ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ವಿದ್ಯಾರ್ಥಿಗಳು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು? ಹೇಗೆ ಅರ್ಜಿ ಸಲ್ಲಿಸುವುದು? ವಿದ್ಯಾರ್ಥಿಗಳಿಗೆ ಎಷ್ಟು ಸಹಾಯಧನ ಸಿಗಲಿದೆ?ಹೀಗೆ ಈ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಪ್ರಸ್ತುತ ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.
ನಿಮಗೇನಾದರೂ ನಿಮ್ಮ ಶಿಕ್ಷಣಕ್ಕೆ ನೇರವಾಗುವ ಇದೇ ರೀತಿಯ ವಿವಿಧ ವಿದ್ಯಾರ್ಥಿವೇತನಗಳ ಕುರಿತು ಮಾಹಿತಿ ಬೇಕಾ? ಹಾಗಿದ್ದರೆ ನಮ್ಮ ವೆಬ್ಸೈಟ್ ಕನ್ನಡಹೆಲ್ಫ್ ಗೆ ಭೇಟಿ ನೀಡಿ.

ವಿದ್ಯಾರ್ಥಿವೇತನದ ಕಿರು ವಿಮರ್ಶೆ:
| ಸ್ಕೀಮ್ ಹೆಸರು | ಷ್ನೇಯ್ಡರ್ ಸ್ಕಾಲರ್ ಪ್ರೋಗ್ರಾಂ (Schneider Scholarship) |
| ವಿದ್ಯಾರ್ಥಿವೇತನ ನೀಡುವ ಸಂಸ್ಥೆ | ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ |
| ಶೈಕ್ಷಣಿಕ ವರ್ಷ | 2025-26 |
| ಫಲಾನುಭವಿಗಳು | ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನೀಯರು |
| ವಿದ್ಯಾರ್ಥಿವೇತನದಡಿಯಲ್ಲಿ ಸಿಗುವ ಒಟ್ಟು ಮೊತ್ತ | ₹50,000 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಉದ್ದೇಶ | ತಾಂತ್ರಿಕ ಶಿಕ್ಷಣ ಪಡೆಯುವಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು |
ವಿದ್ಯಾರ್ಥಿವೇತನದ ಕುರಿತು:
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯು ಷ್ನೇಯ್ಡರ್ ಸ್ಕಾಲರ್ ಪ್ರೋಗ್ರಾಮ್ ಯೋಜನೆಯಡಿಯಲ್ಲಿ ಡಿಪ್ಲೋಮಾ, ಇಂಜಿನೀರಿಂಗ್ ಹಾಗೂ ಬಿ.ಟೆಕ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಮುಂದಾಗಿದ್ದು, ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ತಿನೀಯರಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಈ ವಿದ್ಯಾರ್ಥಿವೇತನ (Schneider Scholarship) ವನ್ನು ಮುಖ್ಯವಾಗಿ ವಿದ್ಯಾರ್ಥಿನೀಯರಿಗೆ ನೀಡುವ ಉದ್ದೇಶ, ತಾಂತ್ರಿಕ ಶಿಕ್ಷಣ ಪಡೆಯುವಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಹಾಗೂ ವಿದ್ಯಾರ್ಥಿನೀಯರು ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಮೋಟಕುಗೊಳಿಸುವುದನ್ನು ತಡೆಗಟ್ಟುವುದಾಗಿದೆ.
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯ ಆಶಯ:
- ಮಹಿಳಾ ಸಬಲೀಕರಣಕ್ಕೆ ಉತ್ತೇಜನ:
ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದು ಹಾಗೂ ಇಲ್ಲಿ ಪುರುಷರಷ್ಟೇ ಸಮಾನ ಅವಕಾಶ ಮಹಿಳೆಯರಿಗೂ ಸಿಗುವಂತೆ ಅವಕಾಶ ಕಲ್ಪಿಸುವುದು.
- ಆರ್ಥಿಕ ಸಮಸ್ಯೆಗೆ ನೆರವು:
ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿನೀಯರಿಗೆ ಶಿಕ್ಷಣ ಪಡೆದುಕೊಳ್ಳುವಾಗ ಎದುರಾಗುವ ದೊಡ್ಡ ಸಮಸ್ಯೆಯೇ ಆರ್ಥಿಕ ಸಮಸ್ಯೆ. ಈ ಒಂದು ಸಮಸ್ಯೆಯಿಂದಾಗಿ ಸಾಕಷ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುತ್ತಾರೆ. ಅದಕ್ಕಾಗಿಯೇ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯು ₹50,000 ಸಹಾಯಧನವನ್ನು ಒದಗಿಸುವ ಮೂಲಕ ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಗಟ್ಟುವ ಪ್ರಯತ್ನ ಮಾಡಿದೆ.
- ಸ್ವಾವಲಂಬಿ ಜೀವನ ನಡೆಸಲು ಅವಕಾಶ:
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯು ನೀಡುವ ಈ ಸಹಾಯಧನ ಕೇವಲ ಹಣಕಾಸಿನ ನೆರವಲ್ಲ. ಬದಲಾಗಿ ವಿದ್ಯಾರ್ಥಿನೀಯರು ಉನ್ನತ ಗುಣಮಟ್ಟದ ಶಿಕ್ಷಣವನ್ನು ಪಡೆದು, ಸಮಾಜದಲ್ಲಿ ಗೌರವಯುತ ಉದ್ಯೋಗವನ್ನು ಪಡೆದು ತಮ್ಮ ಕಾಲ ಮೇಲೆ ತಾವು ನಿಂತುಕೊಳ್ಳುವಂತೆ ಮಾಡುವ ಒಂದೊಳ್ಳೆಯ ವೇದಿಕೆಯಾಗಿದೆ.
ವಿದ್ಯಾರ್ಥಿಗಳಿಗಾಗುವ ಪ್ರಯೋಜನ:
- ಶೈಕ್ಷಣಿಕ ವೆಚ್ಚ ಭರಿಸಲು ಧನಸಹಾಯ:
ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನೀಯರು ತಮ್ಮ ಕಾಲೇಜು ಫೀಸ್, ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ ಪುಸ್ತಕಗಳ ಖರೀದಿ ಸೇರಿದಂತೆ ಇನ್ನಷ್ಟು ಶೈಕ್ಷಣಿಕ ವೆಚ್ಚವನ್ನು ಭರಿಸಲು ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯು ನೀಡುವ ₹50,000 ಮೌಲ್ಯದ ವಿದ್ಯಾರ್ಥಿವೇತನ ನೆರವಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿನೀಯರು ತಮ್ಮ ಎಲ್ಲಾ ಗಮನವನ್ನು ಶಿಕ್ಷಣ ಪಡೆಯುದರ ಮೇಲೆ ಕೇಂದ್ರೀಕರಿಸಿ ಹೆಚ್ಚಿನ ಅಂಕವನ್ನು ಗಳಿಸಬಹುದಾಗಿದೆ.
- ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣ ಪಡೆಯಲು ಅವಕಾಶ:
ಇಂಜಿನೀರಿಂಗ್, ಡಿಪ್ಲೋಮಾ ಹಾಗೂ ಬಿ.ಟೆಕ್ ನಂತಹ ತಾಂತ್ರಿಕ ಶಿಕ್ಷಣವನ್ನು ಪಡೆದುಕೊಳ್ಳಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಹಣವನ್ನು ನೀಡಬೇಕಾಗುತ್ತದೆ. ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯು ನೀಡುವ ವಿದ್ಯಾರ್ಥಿವೇತನದ ಅಡಿಯಲ್ಲಿ ಸಿಗುವ ಸಹಾಯಧನವನ್ನು ವಿದ್ಯಾರ್ಥಿಗಳ ಮೇಲಿನ ಭಾರೀ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದೆ.
- ಯಾವುದೇ ರೀತಿಯ ಅಡತಡೆಗಳಿಲ್ಲದೆ ನೇರವಾಗಿ ಹಣ ಪಡೆಯಲು ಅವಕಾಶ:
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯು ನೀಡುವ ₹50,000 ವಿದ್ಯಾರ್ಥಿವೇತನವು ನೇರವಾಗಿ ಅರ್ಹ ವಿದ್ಯಾರ್ಥಿನೀಯರ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ಇದು ಹೆಚ್ಚು ಪಾರದರ್ಶಕತೆಯಿಂದ ಕೂಡಿರುವುದರಿಂದ ವಿದ್ಯಾರ್ಥಿನಿಯರು ಯಾವುದೇ ರೀತಿಯ ವಂಚನೆಗೆ ಒಳಗಾಗುವ ಅಗತ್ಯ ಇರುವುದಿಲ್ಲ.
ವಿದ್ಯಾರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ:
- ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿನೀಯರು ಭಾರತದ ನಿವಾಸಿ ಆಗಿರಬೇಕು.
- ವಿದ್ಯಾರ್ಥಿನೀಯರು 10 ನೇ ತರಗತಿಯಲ್ಲಿ ಹಾಗೂ 12 ನೇ ತರಗತಿಯಲ್ಲಿ ಕನಿಷ್ಠ 65% ಅಂಕವನ್ನು ಗಳಿಸಿರಬೇಕು.
- ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಬಿ.ಟೆಕ್ ಗಳಲ್ಲಿ ಪ್ರಥಮ ವರ್ಷದಲ್ಲಿ ಕನಿಷ್ಠ 70% ಅಂಕವನ್ನು ಗಳಿಸಿರಬೇಕು.
- ಅರ್ಜಿ ಸಲ್ಲಿಸುವ ವಿದ್ಯಾರ್ಥಿನೀಯರು ಪ್ರಸ್ತುತ ಸಾಲಿನಲ್ಲಿ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಬಿ.ಟೆಕ್ ಗಳಂತಹ ತಾಂತ್ರಿಕ ಶಿಕ್ಷಣದಲ್ಲಿ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ₹4 ಲಕ್ಷ ಮೀರಿರಬಾರದು.
- ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ತಾಂತ್ರಿಕ ಶಿಕ್ಷಣ ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿನೀಯರು ಮಾತ್ರ ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದಡಿಯಲ್ಲಿ ಎಷ್ಟು ಸಹಾಯಧನ ಸಿಗಲಿದೆ?
ವಿದ್ಯಾರ್ಥಿಗಳು ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಬಿ.ಟೆಕ್ ಗಳಂತಹ ತಾಂತ್ರಿಕ ಶಿಕ್ಷಣವನ್ನು ಪಡೆಯುತ್ತಿದ್ದು, ಈ ಮೇಲೆ ನೀಡಲಾದ ಎಲ್ಲಾ ಅರ್ಹತೆಗಳನ್ನು ಪೂರೈಸುವ ವಿದ್ಯಾರ್ಥಿನೀಯರು ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಅಡಿಯಲ್ಲಿ ಒಟ್ಟು ₹50,000 ಮೌಲ್ಯದ ವಿದ್ಯಾರ್ಥಿವೇತನ (Schneider Scholarship) ವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪ್ರಸ್ತುತ ಸಾಲಿನ ಪ್ರವೇಶ ಪತ್ರ
- ಬ್ಯಾಂಕ್ ಪಾಸ್ ಬುಕ್
- ಪಾಸ್ಪೋರ್ಟ್ ಸೈಜ್ ಫೋಟೋ
- ಶುಲ್ಕ ಪಾವತಿಯ ರಶೀದಿ
- 10 ನೇ ತರಗತಿ ಅಂಕಪಟ್ಟಿ
- 12 ನೇ ತರಗತಿ ಅಂಕಪಟ್ಟಿ
ಅರ್ಜಿ ಸಲ್ಲಿಸುವ ವಿಧಾನ:
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ವತಿಯಿಂದ ಸಿಗುವ ವಿದ್ಯಾರ್ಥಿವೇತನ (Schneider Scholarship) ವನ್ನು ಪಡೆದುಕೊಳ್ಳಲು ಅರ್ಹ ವಿದ್ಯಾರ್ಥಿನೀಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
- ಅರ್ಜಿ ಸಲ್ಲಿಸುವ ವಿದ್ಯಾರ್ಥಿನಿಯರು ವಿದ್ಯಾರ್ಥಿವೇತನದ ಅಧಿಕೃತ ವೆಬ್ಸೈಟ್ https://www.buddy4study.com/ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ಅಪ್ಲೈ ನೌ ಬಟನ್ ಅನ್ನು ಕ್ಲಿಕ್ ಮಾಡಿ ಖಾತೆ ರಚಿಸಿ ಮೇಲೆ ಕ್ಲಿಕ್ ಮಾಡಿ.
- ಹೊಸ ಬಳಕೆದಾರರಾಗಿದ್ದರೆ, ಬಳಕೆದಾರರ ಐಡಿ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಆಗಿ
- ಅಲ್ಲಿ ಕೇಳಲಾದ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಅಗತ್ಯ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.
ಕೊನೆಯ ಮಾತು:
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ಸಂಸ್ಥೆಯು ತಾಂತ್ರಿಕ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿನೀಯರಿಗೆ ₹50,000 ವಿದ್ಯಾರ್ಥಿವೇತನ (Schneider Scholarship) ವನ್ನು ನೀಡುತ್ತಿದೆ. ಹಣಕಾಸಿನ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಿಲ್ಲದ ಸಾವಿರಾರು ವಿದ್ಯಾರ್ಥಿನೀಯರು ಈ ಒಂದು ವಿದ್ಯಾರ್ಥಿವೇತನವನ್ನು ಬಳಸಿಕೊಂಡು ಶಿಕ್ಷಣವನ್ನು ಮುಂದುವರೆಸಬಹುದಾಗಿದೆ.
ಅರ್ಹ ವಿದ್ಯಾರ್ಥಿನೀಯರು ಈ ಒಂದು ವಿದ್ಯಾರ್ಥಿವೇತನದ ಮೂಲಕ ಭಾರೀ ಮೊತ್ತದ ಸಹಾಯಧನವನ್ನು ಪಡೆದುಕೊಂಡು ಉತ್ತಮ ಶಿಕ್ಷಣವನ್ನು ಪಡೆದು, ತಾಂತ್ರಿಕ ಕ್ಷೇತ್ರದಲ್ಲಿ ಒಳ್ಳೆಯ ಉದ್ಯೋಗವನ್ನು ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ.
ನೀವೇನಾದರೂ ಈ ಒಂದು ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹರಾಗಿದ್ದರೆ, ಇಂದೇ ಅರ್ಜಿ ಸಲ್ಲಿಸಿ ನಿಮ್ಮ ಕನಸಿನ ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಕನಸ್ಸನ್ನು ನನಸ್ಸು ಮಾಡಿಕೊಳ್ಳಿ.
ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿರುವ ಸಂಸ್ಥೆ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್.
ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್ ವತಿಯಿಂದ ನೀಡುವ ವಿದ್ಯಾರ್ಥಿವೇತನ ಪಡೆಯಲು ತಾಂತ್ರಿಕ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಹರಾಗಿರುತ್ತಾರೆ.
ಅರ್ಹ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿವೇತನದಡಿಯಲ್ಲಿ ₹50,000 ಸಹಾಯಧನ ಸಿಗಲಿದೆ.
ವಿದ್ಯಾರ್ಥಿನೀಯರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 70% ಅಂಕವನ್ನು ಗಳಿಸಿರಬೇಕು.
ಇತರೆ ಪ್ರಮುಖ ಲಿಂಕುಗಳು :
- PM Kisan: ರೂ. 2000 ರೈತರಿಗೆ ಗುಡ್ ನ್ಯೂಸ್! ಪಿಎಂ ಕಿಸಾನ್ 22ನೇ ಕಂತಿನ ಹಣ ಜಮಾ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
- Mobile Canteen: ರೂ. 5 ಲಕ್ಷ ಸಹಾಯಧನ +ಉಚಿತ ತರಬೇತಿ, ನಿರುದ್ಯೋಗಿಗಳಿಗೆ ಸುವರ್ಣಾವಕಾಶ!
- Raita Shakti Yojane: ಕರ್ನಾಟಕದ ರೈತರಿಗೆ ಭರ್ಜರಿ ಗುಡ್ ನ್ಯೂಸ್! ಕೇವಲ FRUITS ID ಇದ್ದರೆ ₹1250 ಸಹಾಯಧನವನ್ನು ಪಡೆದುಕೊಳ್ಳಬಹುದು
- Raitha Vidya Nidhi Scholarship: ₹11,000/-ವಿದ್ಯಾರ್ಥಿ ವೇತನ! ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
- Breaking News daari: ರೈತರಿಗೆ ಗುಡ್ ನ್ಯೂಸ್! ಜಮೀನು ದಾರಿ ಬಂದ್ ಮಾಡಿದ್ರೆ ಜೈಲು ಶಿಕ್ಷೆ – 2026ರ ಹೊಸ ಆದೇಶ

