Free KAS Coaching 2026 : ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ! KAS ಉಚಿತ ತರಬೇತಿ + ಸ್ಟೈಪಂಡ್

Free KAS Coaching 2026
Free KAS Coaching 2026

ಕೆ.ಎ.ಎಸ್ ಪರೀಕ್ಷೆ ಬರೆಯಲು ಉಚಿತ ತರಬೇತಿ ಪಡೆಯಬೇಕೆಂದು ಬಯಸುತ್ತಿದ್ದೀರಾ? ಹಾಗಿದ್ದರೆ ನಿಮಗೆ ಇಲ್ಲಿದೆ ಸಂತಸದ ಸುದ್ದಿ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಕೆ.ಎ.ಎಸ್ ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲಾಗುತ್ತದೆ.

Free KAS Coaching 2026

ಎಷ್ಟೋ ವಿದ್ಯಾರ್ಥಿಗಳಿಗೆ ಕೆ.ಎ.ಎಸ್ ಪರೀಕ್ಷೆಗೆ ಉಚಿತ ತರಬೇತಿ ಪಡೆದುಕೊಳ್ಳಬಹುದು ಎನ್ನುವದರ ಬಗ್ಗೆ ತಿಳಿದಿಲ್ಲ. ಎಷ್ಟೇ ಪೂರ್ವ ತಯಾರಿ ಮಾಡಿಕೊಂಡು ಹೋದರು ಪರೀಕ್ಷೆಯಲ್ಲಿ ಅಂಕ ಬರುತ್ತಿಲ್ಲ ಎಂದು ಬೇಸರ ಪಡುತ್ತಾರೆ. ಅದಕ್ಕಾಗಿಯೇ ಕರ್ನಾಟಕ ಸರ್ಕಾರವು ಕೆ.ಎ.ಎಸ್ ಪರೀಕ್ಷೆ ಬರೆಯಲು ಇಚ್ಚಿಸುವವರಿಗೆ ಉಚಿತ ತರಬೇತಿಯನ್ನು ನೀಡುವ ಮೂಲಕ ಗುಣಮಟ್ಟದ ಆಡಳಿತ ಸೇವೆಗೆ ಅಗತ್ಯವಾದ ಮಾನವ ಸಂಪನ್ಮೂಲಗಳನ್ನು ರೂಪಿಸಲು ಮುಂದಾಗಿದೆ.

ಕೆ.ಎ.ಎಸ್ ಪರೀಕ್ಷೆಗೆ ಉಚಿತ ತರಬೇತಿ ಪಡೆಯಲು ಯಾರು ಅರ್ಹರು? ಅಗತ್ಯ ದಾಖಲೆಗಳೇನು? ಅಜಿ ಸಲ್ಲಿಸುವುದು ಹೇಗೆ? ಹೀಗೆ ಇನ್ನಷ್ಟು ಮಾಹಿತಿಗಳನ್ನು ಕೆಳಗಿನ ಹಂತದಲ್ಲಿ ತಿಳಿಯುತ್ತ ಹೋಗೋಣ. ಈ ವಿಷಯದ ಕುರಿತು ಇನ್ನಷ್ಟು ಮಾಹಿತಿ ಬೇಕಿದ್ದಲ್ಲಿ ನಮ್ಮ ವೆಬ್ಸೈಟ್ ಕನ್ನಡ ಹೆಲ್ಪ್ ಗೆ ಭೇಟಿ ನೀಡಿ.

ತರಬೇತಿಯ ಕುರಿತು ಕಿರು ವಿಮರ್ಶೆ: (Free KAS Coaching 2026)

ತರಬೇತಿ ಕೆ.ಎ.ಎಸ್ ತರಬೇತಿ
ಇಲಾಖೆ ಸಮಾಜ ಕಲ್ಯಾಣ ಇಲಾಖೆ
ತರಬೇತಿ ಕೇಂದ್ರ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್
Free KAS Coaching 2026

ಸಂಕ್ಷಿಪ್ತ ಮಾಹಿತಿ:

ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಪರೀಕ್ಷಾ ಪೂರ್ವ ತರಬೇತಿ ಕೇಂದ್ರವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಕೆ.ಎ.ಎಸ್, ಯು.ಪಿ.ಎಸ್.ಸಿ, ಬ್ಯಾಂಕಿಂಗ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡುವುದು ಇದರ ಮೂಖ್ಯ ಉದ್ದೇಶವಾಗಿದೆ.

ಉಚಿತ ತರಬೇತಿ ನೀಡುವುದರ ಉದ್ದೇಶ:

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ಉಚಿತ ತರಬೇತಿಯನ್ನು ಒದಗಿಸುವುದು.
  • ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯುವಕರ ಪ್ರಾಧಾನ್ಯತೆಯನ್ನು ಹೆಚ್ಚಿಸಿ, ಅವರನ್ನು ಉದ್ಯೋಗ ಪಡೆಯಲು ಸಮರ್ಥರನ್ನಾಗಿ ಮಾಡುವುದು.
  • ಅರ್ಹ ಅಭ್ಯರ್ಥಿಗಳಿಗೆ ತರಬೇತಿ ಪಡೆಯುವ ಸಮಯದಲ್ಲಿ ಸ್ಟೈಪಂಡ್ ನೀಡುವ ಮೂಲಕ ಅವರ ಜೀವನೋಪಾಯಕ್ಕಾಗಿ ಬೆಂಬಲ ನೀಡುವುದು.
  • ಅರ್ಹ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಉತ್ತಮ ಮಾರ್ಗದರ್ಶನ ಹಾಗೂ ಆರ್ಥಿಕ ನೆರವನ್ನು ಒದಗಿಸುವುದು.

ತರಬೇತಿಯ ಅವಧಿ: Free KAS Coaching 2026

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಕೆ.ಎ.ಎಸ್ ಮುಖ್ಯ ಪರೀಕ್ಷೆ ಅಥವಾ ಪೂರ್ವಭಾವಿ ಪರೀಕ್ಷೆಗಳಿಗೆ ಉಚಿತ ತರಬೇತಿ ಪಡೆಯಲು ಅವಕಾಶವಿದ್ದು,ಈ ತರಬೇತಿ ಅವಧಿಯು 7 ತಿಂಗಳುಗಳ ಕಾಲ ಇರುತ್ತದೆ ಜೊತೆಗೆ ತರಬೇತಿ ಪಡೆಯುವ ಅವಧಿಯಲ್ಲಿ ಈ ಕೆಳಗಿನ ಆಧಾರದ ಮೇಲೆ ಮಾಸಿಕ ಸ್ಟೈಪಂಡ್ ನೀಡಲಾಗುವುದು.

ಬೆಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವವರಿಗೆ – ₹10,000/-

ಇತರೆ ಜಿಲ್ಲಾ ಕೇಂದ್ರಗಳಲ್ಲಿ ತರಬೇತಿ ಪಡೆಯುವವರು – ₹8,000/-

ಅರ್ಹತಾ ಮಾನದಂಡ:

  • ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಅಭ್ಯರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಕ್ಕೆ ಸೇರಿದವರಾಗಿರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ 37 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹5 ಲಕ್ಷ ಮೀರಿರಬಾರದು.
  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ಇಲ್ಲಿ ಗಮನಿಸಿ: ಅಭ್ಯರ್ಥಿಗಳು ಪದವಿಯಲ್ಲಿ ಅಂತಿಮ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ, ಆಯ್ಕೆ ವೇಳೆಗೆ ಅಭ್ಯರ್ಥಿಗಳು ಪದವಿ ಮುಗಿಸಿರುವುದು ಕಡ್ಡಾಯವಾಗಿದೆ.

ಅಗತ್ಯ ದಾಖಲೆಗಳು: Free KAS Coaching 2026

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಕರ್ನಾಟಕ ನಿವಾಸ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪದವಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಪಾಸ್ಪೋರ್ಟ್ ಸೈಜ್ ಫೋಟೋ
  • SSLC ಅಂಕ ಪಟ್ಟಿ
  • PUC ಅಂಕ ಪಟ್ಟಿ

ಅರ್ಜಿ ಸಲ್ಲಿಸುವ ವಿಧಾನ:

ಕೆ.ಎ.ಎಸ್ ಉಚಿತ ತರಬೇತಿಯನ್ನು ಪಡೆಯಲು ಕೆಳಗಿನ ಹಂತಗಳ ಆಧಾರದ ಮೇಲೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

  • ಸಮಾಜ ಕಲ್ಯಾಣ ಇಲಾಖೆ ಅಧಿಕೃತ ವೆಬ್ಸೈಟ್ https://swdservices.karnataka.gov.in/petccoaching/ ಗೆ ಅಥವಾ https://igccd.karnataka.gov.in/Home.html ಭೇಟಿ ನೀಡಿ.
  • ಹೊಸ ಬಳಕೆದಾರರಾಗಿದ್ದರೆ, ನ್ಯೂ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ, ಆಧಾರ್ ಸಂಖ್ಯೆ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಆಗಿ
  • ನಂತರ ನೀವು ಬಯಸಿದ ಕೆ.ಎ.ಎಸ್ ತರಬೇತಿಯನ್ನು ಆಯ್ಕೆ ಮಾಡಿ.
  • ಅಲ್ಲಿ ಕೇಳಲಾದ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಅಪ್ಲೈ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ, ನಂತರ ಸಿಗುವ ಅರ್ಜಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ.
  • ಅರ್ಜಿ ಸಲ್ಲಿಸಿದ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: Free KAS Coaching 2026

2026 ನೇ ಸಾಲಿನ ತರಬೇತಿಗಳಿಗೆ ಅರ್ಜಿ ಸಲ್ಲಿಸುವ ದಿನಾಂಕದ ಅಧಿಸೂಚನೆಯನ್ನು ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡುವ ಸಾದ್ಯತೆಗಳಿದ್ದು, ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಜನವರಿ 22, 2026 ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 20, 2026 ಎಂದು ನಿರೀಕ್ಷಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: Free KAS Coaching 2026

  • ಇಲಾಖೆಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ಹೆಚ್ಚು ಅಂಕ ಗಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
  • ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮವನ್ನು ಪಾಲಿಸಲಾಗುತ್ತದೆ.

ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ 


ತೀರ್ಮಾನ:-

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕೆ.ಎ.ಎಸ್ ಮುಖ್ಯ ಪರೀಕ್ಷೆ ಅಥವಾ ಪೂರ್ವಭಾವಿ ಪರೀಕ್ಷೆಗಳಿಗೆ ಉಚಿತ ತರಬೇತಿ ಪಡೆಯಲು ಅಭ್ಯರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿದ್ದು, ಈ ಇಲಾಖೆಯಡಿಯಲ್ಲಿ ಈಗಾಗಲೇ UPSC ತರಬೇತಿ ಪಡೆದುಕೊಂಡಿದ್ದರೆ KAS ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ಈ ಮೊದಲು ತರಬೇತಿ ಪಡೆಯದ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.


ಇತರೆ ಪ್ರಮೂಖ ಲಿಂಕುಗಳು:

Leave a Reply

Your email address will not be published. Required fields are marked *