Jobs Alert : ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ! ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM Recruitment ) 2026 ರ ನೇಮಕಾತಿಯಲ್ಲಿ ಐಟಿಐ ಎಲೆಕ್ಟ್ರಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ.
HESCOM Recruitment In Kannada Information

ಅಪ್ರೆಂಟಿಸ್ ಟ್ರೈನ್ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದ್ದು, ಅಭ್ಯರ್ಥಿಗಳು ಅಪ್ರೆಂಟಿಸ್ ಶಿಪ್ ನಲ್ಲಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು 02-03-2026 ಕೊನೆಯ ದಿನಾಂಕವಾದರೆ, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು 09-03-2026 ಕೊನೆಯ ದಿನಾಂಕವಾಗಿದೆ. ಸರ್ಕಾರಿ ಒಡೆತನದ ವಿದ್ಯುತ್ ಸಂಸ್ಥೆಯಲ್ಲಿ ಕೆಲಸಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ!
ಐಟಿಐ ಎಲೆಕ್ಟ್ರಿಷಿಯನ್ (ಅಪ್ರೆಂಟಿಸ್ ಟ್ರೈನಿ) ಹುದ್ದೆಗೆ ಅರ್ಜಿ ಸಲ್ಲಿಸಲು ಕೇವಲ ಐಟಿಐ ಪೂರ್ಣಗೊಳಿಸಿದರೆ ಸಾಕಾಗುತ್ತದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷದ ತರಬೇತಿಯಲ್ಲಿ ಅತ್ಯಾಕರ್ಷಕ ಸ್ಟೈಪಂಡ್ ಪಡೆಯಬಹುದಾಗಿದೆ.
ಹೆಸ್ಕಾಂ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿಗಳ ಬಗ್ಗೆ ಮಾಹಿತಿ ಬೇಕಿದ್ದರೆ, ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡಹೆಲ್ಪ್ ಗೆ ಭೇಟಿ ನೀಡಿ.
ಹುದ್ದೆಯ ಕಿರು ಚಿತ್ರಣ:
| ನೇಮಕಾತಿ ಸಂಸ್ಥೆ | ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM Recruitment) |
| ಹುದ್ದೆಯ ಹೆಸರು | ಐಟಿಐ ಎಲೆಕ್ಟ್ರಿಷಿಯನ್ (ಅಪ್ರೆಂಟಿಸ್ ಟ್ರೈನಿ) |
| ಹುದ್ದೆಯ ಸಂಖ್ಯೆ | 388 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮತ್ತು ಆಫ್ಲೈನ್ |
ಹುದ್ದೆಯ ಬಗ್ಗೆ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM Recruitment) ಒಟ್ಟು 388 ಐಟಿಐ ಎಲೆಕ್ಟ್ರಿಷಿಯನ್ (ಅಪ್ರೆಂಟಿಸ್ ಟ್ರೈನಿ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಐಟಿಐ ಪೂರ್ಣಗೊಳಿಸಿದ ಕನಿಷ್ಠ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹುಬ್ಬಳ್ಳಿ, ಕಾರವಾರ ಹಾಗೂ ಇನ್ನಿತರ ಹೆಸ್ಕಾಂ ವ್ಯಾಪ್ತಿಯ ವಲಯಗಳಲ್ಲಿ ಒಟ್ಟು 388 ಐಟಿಐ ಎಲೆಕ್ಟ್ರಿಷಿಯನ್ (ಅಪ್ರೆಂಟಿಸ್ ಟ್ರೈನಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತಾ ಮಾನದಂಡ:
- ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM Recruitment) ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.
- ಹತ್ತನೇ ತರಗತಿಯಲ್ಲಿ ಕನ್ನಡ ವಿಷಯವನ್ನು ಆಯ್ಕೆ ಮಾಡಿಕೊಂಡಿರಬೇಕು ಹಾಗೂ ಕನ್ನಡ ವನ್ನು ಓದಲು ಬರೆಯಲು ಬರುವಂತವರಾಗಿರಬೇಕು.
| ಇಲ್ಲಿ ಗಮನಿಸಿ: “ಹೆಸ್ಕಾಂ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು NCVT ಅಥವಾ SCVT ಈ ಎರಡು ಮಂಡಳಿಗಳಲ್ಲಿ ಯಾವುದಾದರು ಒಂದು ಮಂಡಳಿಯಲ್ಲಿ ಐಟಿಐ ಪೂರ್ಣಗೊಳಿಸಿದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.” |
ವೇತನ ವಿವರ:
ಹೆಸ್ಕಾಂ (HESCOM Recruitment) ಅಧಿಕೃತ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ನೇಮಕಗೊಂಡು ಅಭ್ಯರ್ಥಿಗಳಿಗೆ ಮಾಸಿಕ ₹9,600 ಸ್ಟೈಪಂಡ್ ನೀಡಲಾಗುವುದು.
| ವಿಶೇಷ ಸೂಚನೆ: “ಇದು ವಿದ್ಯುತ್ ಸಂಸ್ಥೆಯ ಕಾಯಂ ಕೆಲಸವಲ್ಲ. ಬದಲಾಗಿ ಹೆಸ್ಕಾಂ ಸಂಸ್ಥೆಯಲ್ಲಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಪಡೆಯಲು ಸೀಮಿತವಾಗಿರುತ್ತದೆ.” |
ವಯೋಮಿತಿ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM Recruitment) ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಟ 25 ವರ್ಷ ವಯೋಮಿತಿ ಹೊಂದಿರಬೇಕು.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ ವಿವರ :
ವಿವಿಧ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅವುಗಳನ್ನು ಈ ಕೆಳಕಂಡಂತೆ ನೋಡಬಹುದು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ಸಾಧ್ಯವಾಗುವುದಿಲ್ಲ. ಬದಲಾಗಿ ಇಂಡಿಯನ್ ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕಾಗುತ್ತದೆ.
| ಸಾಮಾನ್ಯ / OBC ಅಭ್ಯರ್ಥಿಗಳು | ₹100/- |
| ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು | ₹50/- |
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಅಭ್ಯರ್ಥಿಗಳು ಹೆಸ್ಕಾಂ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಈ ಕೆಳಗೆ ನೀಡಿರುವ ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
- ಆಧಾರ್ ಕಾರ್ಡ್
- ಐಟಿಐ ಮಾರ್ಕ್ಸ್ ಕಾರ್ಡ್
- SSLC ಮಾರ್ಕ್ಸ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ದಾಖಲಾತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ಹೇಗೆ ನಡೆಯುತ್ತದೆ?
- ಐಟಿಐ ನಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.
- ಸರ್ಕಾರವು ಮೀಸಲಾತಿ ನಿಯಮಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುವುದು.
- ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿಯನ್ನು ಪರಿಶೀಲನೆ ಮಾಡಲಾಗುವುದು. ನಂತರ ಅಭ್ಯರ್ಥಿಗಳು ವೈದ್ಯರಿಂದ ಪಡೆದುಕೊಂಡ ದೈಹಿಕ ಸಾಮರ್ಥ್ಯ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.
- ಅಭ್ಯರ್ಥಿಗಳು ನೀಡಿದ ದಾಖಲೆಗಳು ಸರಿ ಇದ್ದು, ವೈದ್ಯಕೀಯವಾಗಿ ಅರ್ಹರಾಗಿದ್ದರೆ ಅಂತಹ ಅಭ್ಯರ್ಥಿಗಳನ್ನು ಮೆಸ್ಕಾಂ ನಲ್ಲಿ ತರಬೇತಿ ಪಡೆಯಲು ಕರೆಯಲಾಗುತ್ತದೆ.
ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ವಿವಿಧ ಹಂತಗಳನ್ನು ಫಾಲೋ ಮಾಡಬೇಕಾಗುತ್ತದೆ. ಅವುಗಳನ್ನು ಈ ಕೆಳೆಗೆ ನೀಡಲಾಗಿದೆ.
ಹಂತ 1: ಆನ್ಲೈನ್ ಮೂಲಕ ಅಪ್ರೆಂಟಿಸ್ ಶಿಪ್ ಪೋರ್ಟಲ್ ನಲ್ಲಿ ನೊಂದಾಯಿಸಿಕೊಳ್ಳಿ:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಅಪ್ರೆಂಟಿಸ್ ಶಿಪ್ ಅಧಿಕೃತ ಪೋರ್ಟಲ್ http://www.apprenticeshipindia.gov.in/ ಗೆ ಭೇಟಿ ನೀಡಿ ನೋಂದಣಿ ಪೂರ್ಣಗೊಳಿಸಿ.
- ಅಪ್ರೆಂಟಿಸ್ ಶಿಪ್ ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಾಗ ನಿಮ್ಮ SSLC ಅಂಕ ಪಟ್ಟಿಯಲ್ಲಿ ಇರುವ ರೀತಿಯಲ್ಲೇ ನಿಮ್ಮ ಹೆಸರು ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ.
- ನಂತರ ಸರ್ಚ್ ಬಾಕ್ಸ್ ನಲ್ಲಿ ‘ಹುಬ್ಬಳ್ಳಿ ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (HESCOM Recruitment) ಅಂತ ಟೈಪ್ ಮಾಡಿ. ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
ಹಂತ 2: ಅಂಚೆ ಕಚೇರಿಗೆ ಭೇಟಿ ನೀಡಿ ಅರ್ಜಿ ಶುಲ್ಕ ಪಾವತಿಸಿ:
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿದ ನಂತರ ನಿಮ್ಮ ಹತ್ತರದ ಅಂಚೆ ಕಚೇರಿಗೆ ಭೇಟಿ ನೀಡಿ ನಿಮ್ಮ ವರ್ಗಕ್ಕೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.
ಹಂತ 3: ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಮೇಲೆ ತಿಳಿಸಿರುವಂತೆ ಅಪ್ರೆಂಟಿಸ್ ಶಿಪ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಸಂಬಂಧಿಸಿದ ಅರ್ಜಿ ಪ್ರತಿಯನ್ನು ಪಡೆದುಕೊಂಡು ನಂತರ ಅರ್ಜಿ ನಮೂನೆಯನ್ನು ಭರ್ತಿಮಾಡಿದ ನಂತರ ಮೇಲೆ ನೀಡಲಾದ ಅಗತ್ಯ ದಾಖಲೆಗಳನ್ನು ಅರ್ಜಿ ಪ್ರತಿಯೊಂದಿಗೆ ಲಗತ್ತಿಸಿ.
ನಂತರ ಅಗತ್ಯ ದಾಖಲೆಗಳನ್ನು ಲಗತ್ತಿಸಿದ ಅರ್ಜಿ ಪ್ರತಿಯನ್ನು ಒಂದು ಲಕೋಟೆಗೆ ಹಾಕಿ. ಅದರ ಮೇಲೆ ‘ಅಪ್ಲಿಕೇಶನ್ ಫಾರ್ ಐಟಿಐ ಅಪ್ರೆಂಟಿಸ್ ಶಿಪ್ ಟ್ರೈನಿ’ ಎಂದು ಬರೆದು ಈ ಕೆಳಗೆ ನೀಡುವ ವಿಳಾಸಕ್ಕೆ ಕಳುಹಿಸಿ.
“ಕಾರ್ಯ ನಿರ್ವಾಹಕ ಇಂಜಿನಿಯರ್ (ವಿ), ಕೈಗಾರಿಕಾ ತರಬೇತಿ ಕೇಂದ್ರ (ಐಟಿಸಿ), ಹೆಸ್ಕಾಂ ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ -580024“
| ವಿಶೇಷ ಸೂಚನೆ: “ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೆಸ್ಕಾಂ ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿಕೊಂಡು, ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂಡು ಅರ್ಜಿ ಸಲ್ಲಿಸಿ.” |
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಈಗಾಗಲೇ ಆರಂಭಗೊಂಡಿದೆ |
| ಆನ್ಲೈನ್ ಮೂಲಕ ನೋಂದಣಿ ಪೂರ್ಣಗೊಳಿಸಲು ಕೊನೆಯ ದಿನಾಂಕ | 02-03-2026 |
| ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 09-03-2026 |
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ರೆಂಟಿಸ್ ಶಿಪ್ ಪೋರ್ಟಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM Recruitment) ಐಟಿಐ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಪ್ರೆಂಟಿಸ್ ಶಿಪ್ ಅಧಿಕೃತ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ನಂತರ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ಈ ಮೊದಲು ಯಾವುದೇ ಸರ್ಕಾರಿ ಸಂಸ್ಥೆ ಅಥವಾ ಖಾಸಗಿ ಸಂಸ್ಥೆಯಲ್ಲಿ ಅಪ್ರೆಂಟಿಸ್ ಶಿಪ್ ತರಬೇತಿ ಪಡೆದುಕೋದಿದ್ದರೆ ಅಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ ಎನ್ನುವುದನ್ನು ತಿಳಿದುಕೊಳ್ಳಿ.
ಪದೇ ಪದೇ ಕೇಳಲ್ಪಡುವ ಪ್ರಶ್ನೆಗಳು:
ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.
ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಯಲ್ಲಿ ಒಟ್ಟು 388 ಹುದ್ದೆಗಳು ಖಾಲಿ ಇದೆ.
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ರಿಂದ ಗರಿಷ್ಟ 30 ವರ್ಷ ವಯೋಮಿತಿ ಹೊಂದಿರಬೇಕು.
ಇತರೆ ಪ್ರಮುಖ ಲಿಂಕುಗಳು :
- VAO Recruitment : ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಹುದ್ದೆಗಳಿಗೆ ನೇರ ನೇಮಕಾತಿ 2026!
- Panchayat Raj Commissionerate : PUC ಪಾಸ್ ಆದ್ರೆ ಸಾಕು! ಪಂಚಾಯತ್ ರಾಜ್ನಲ್ಲಿ 25,311 ಸರ್ಕಾರಿ ಹುದ್ದೆಗಳು!

