ನಮಸ್ಕಾರ ಸ್ನೇಹಿತರೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ 2026-27 ನೇ ಸಾಲಿನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 1,300 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅರ್ಜಿ ಆಹ್ವಾನಿಸಲಾಗಿದೆ.
IDBI Recruitment in Kannada
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ತಮ್ಮ ಕಾರ್ಯಾಚರಣೆಯ 60 ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಸಂಭ್ರಮದಲ್ಲಿ ಭರ್ಜರಿ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಉದ್ಯೋಗವಿಲ್ಲದೆ ಖಾಲಿ ಕುಳಿತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು 19-03-2026 ಕೊನೆಯ ದಿನಾಂಕವಾಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದೀರಾ? ಹಾಗಿದ್ದರೆ ಇಂದೇ ಅರ್ಜಿ ಸಲ್ಲಿಸಿ.
ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡಹೆಲ್ಫ್ ಗೆ ಭೇಟಿ ನೀಡಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) |
| ಹುದ್ದೆಯ ಹೆಸರು | ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | 1,300 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಕಿರು ಪರಿಚಯ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಒಟ್ಟು 1,300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಒಟ್ಟು 1300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘O’) | 1,100 ಹುದ್ದೆಗಳು |
| ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘A’) | 200 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) 2026-27 ನೇ ಸಾಲಿನಲ್ಲಿ ಜೂನಿಯರ್ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ವಿವರವನ್ನು ಈ ಕೆಳಗೆ ನೀಡಲಾಗಿದೆ.
- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೂಡ ಕನಿಷ್ಠ 20 ವರ್ಷದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲವು ವರ್ಗಗಳಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇರುತ್ತದೆ. ಯಾವ ವರ್ಗಗಳ ಅಭ್ಯರ್ಥಿಗಳಿಗೆ ಎಷ್ಟೆಷ್ಟು ವಯೋಮಿತಿ ಸಡಿಲಿಕೆ ಇರುತ್ತದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ (SC/ST) ಅಭ್ಯರ್ಥಿಗಳಿಗೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಅಂಗವಿಕಲ (PwBD) ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ ವಿವರ :
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅವುಗಳನ್ನು ಈ ಕೆಳಕಂಡಂತೆ ನೋಡಬಹುದು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾದರೆ ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
| ಸಾಮಾನ್ಯ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು (OBC) ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳು | ₹1000/- |
| ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು ಹಾಗೂ PwBD ಅಭ್ಯರ್ಥಿಗಳು | ₹200/- |
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಅವುಗಳೆಂದರೆ,
- ಆಧಾರ್ ಕಾರ್ಡ್
- ಪದವಿ ಪ್ರಮಾಣಪತ್ರ
- ಪದವಿ ಅಂಕಪಟ್ಟಿ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಅಭ್ಯರ್ಥಿಗಳ ಸಹಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ಹೇಗೆ ನಡೆಯುತ್ತದೆ?
- ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಇಂಗ್ಲಿಷ್ ಜ್ಞಾನ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ, ತಾರ್ಕಿಕ ಸಾಮರ್ಥ್ಯ ಹಾಗೂ ಗಣಿತದ ಸಾಮರ್ಥ್ಯಗಳ ಕುರಿತು ಪ್ರಶ್ನೆಗಳು ಇರುತ್ತದೆ.
- ವೈಯಕ್ತಿಕ ಸಂದರ್ಶನ: ಅಭ್ಯರ್ಥಿಗಳು ಆನ್ಲೈನ್ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ತಯಾರಿಸಿ. ಶಾರ್ಟ್ ಲಿಸ್ಟ್ ಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕೆರಿಯರ್ ವಿಭಾಗವನ್ನು ಆಯ್ಕೆ ಮಾಡಿ.
- ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹೊಸ ಬಾಳೆಕದಾರರಾಗಿದ್ದರೆ, ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ, ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರವನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಹಾಗೂ ಅಪ್ಲೋಡ್ ಮಾಡಲಾಗಿರುವ ಎಲ್ಲಾ ದಾಖಲೆಗಳು ಸರಿ ಇದೆಯೇ ಎಂದು ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
| ವಿವರಗಳು | ಪ್ರಮುಖ ದಿನಾಂಕಗಳು |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಈಗಾಗಲೇ ಆರಂಭಗೊಂಡಿದೆ (08-03-2026) |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19-03-2026 |
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ PDF | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಒಟ್ಟು 1,300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಎನ್ನುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ.
ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ, ಈ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪದೇ ಪದೇ ಕೇಳಲ್ಪಡುವ ಪ್ರಶ್ನೆಗಳು:
IDBI ನಲ್ಲಿ ಒಟ್ಟು 1,300 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
IDBI ಬ್ಯಾಂಕ್ ನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19-03-2026.
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ಕನಿಷ್ಠ 20 ವರ್ಷದಿಂದ ಗರಿಷ್ಟ 25 ವರ್ಷ.
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಇತರೆ ಪ್ರಮುಖ ಲಿಂಕುಗಳು :
- UPSC Recruitment 2026: 349 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ! ಇಂದೇ ಆನ್ಲೈನ್ ಅರ್ಜಿ ಸಲ್ಲಿಸಿ!
- Raitha Vidya Nidhi Scholarship: ₹11,000/-ವಿದ್ಯಾರ್ಥಿ ವೇತನ! ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
- Breaking News daari: ರೈತರಿಗೆ ಗುಡ್ ನ್ಯೂಸ್! ಜಮೀನು ದಾರಿ ಬಂದ್ ಮಾಡಿದ್ರೆ ಜೈಲು ಶಿಕ್ಷೆ – 2026ರ ಹೊಸ ಆದೇಶ
- PMVY: ಕುಶಲಕರ್ಮಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ₹3 ಲಕ್ಷ ಸಾಲ + ಉಚಿತ ಟೂಲ್ ಕಿಟ್!

