2025-26 ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ವಿವಿಧ ಇಲಾಖೆಗಳ ಅಡಿಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು 2026 ರ ಜನವರಿ ಹಾಗೂ ಫೆಬ್ರುವರಿ ತಿಂಗಳಲ್ಲಿ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಿ.
Karnataka SSP Scholarship In Karnataka
ವಿದ್ಯಾರ್ಥಿಗಳು ಕೆಲವು ಇಲಾಖೆಗಳ ಅಡಿಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಬಗ್ಗೆ ಗೊಂದಲಗಳಿದ್ದರೆ ನಮ್ಮ ವೆಬ್ಸೈಟ್ ಕನ್ನಡ ಹೆಲ್ಪ್ ಗೆ ಭೇಟಿ ನೀಡಿ. ನಿಮ್ಮ ಗೊಂದಲಗಳನ್ನು ಪರಿಹರಿಸಿಕೊಳ್ಳಿ.
ವಿದ್ಯಾರ್ಥಿವೇತನದ ವಿಮರ್ಶೆ: (Karnataka SSP Scholarship 2026)
| ಪೋರ್ಟಲ್ | ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ |
| ಶೈಕ್ಷಣಿಕ ವರ್ಷ | 2025-26 |
| ಫಲಾನುಭವಿಗಳು | ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ವಿದ್ಯಾರ್ಥಿವೇತನದ ಕುರಿತು:
ಶೈಕ್ಷಣಿಕ ಪ್ರಗತಿಗಾಗಿ ಜಾರಿಗೆ ತಂದಿರುವ ಅತ್ಯಂತ ಪ್ರಮುಖ ಡಿಜಿಟಲ್ ವೇದಿಕೆಯೇ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್. ಕರ್ನಾಟಕ ಸರ್ಕಾರವು ಈ ಡಿಜಿಟಲ್ ವೇದಿಕೆಯಿಂದ ಅರ್ಹ ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಹಣಕಾಸಿನ ನೆರವನ್ನು ನೀಡುತ್ತದೆ.
ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ SSP ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಿದ್ದು, ಸಂಬಂಧ ಪಟ್ಟ ಇಲಾಖೆಗಳು ಈಗಾಗಲೇ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಪ್ರಕಟಿಸಿದೆ. ಈ ಕೆಳಕಂಡ ಹಂತಗಳಲ್ಲಿ ಈ ಎಲ್ಲ ಮಾಹಿತಿಗಳ ಬಗ್ಗೆ ನೀಡಲಾಗಿದೆ. ಅದನ್ನು ನೋಡೋಣ ಬನ್ನಿ.
ವಿದ್ಯಾರ್ಥಿವೇತನ ನೀಡುವ ಉದ್ದೇಶ: Karnataka SSP Scholarship 2026
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು:
ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಿ, ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವುದನ್ನು ತಡೆಯುವುದು.
ಉನ್ನತ ಗುಣಮಟ್ಟದ ಶಿಕ್ಷಣ:
ಪದವಿ, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣಗಳಂತಹ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಮತ್ತು ಶೈಕ್ಷಣಿಕ ಮಟ್ಟವನ್ನು ಸುಧಾರಿಸುವುದು.
ನೇರ ನಗದು ವರ್ಗಾವಣೆ:
ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ವಿದ್ಯಾರ್ಥಿಗಳ ಆಧಾರ್ ಲಿಂಕ್ ಆಗಿರವ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು.
ಸುಲಭ ವಿಧಾನ:
ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಹಾಕಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುವುದು.
SSP ವಿದ್ಯಾರ್ಥಿವೇತನದ ಪ್ರಯೋಜನ: Karnataka SSP Scholarship 2026
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ:
- SC/ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯದ ಆಧಾರದ ಮೇಲೆ ಒಂದು ಶೈಕ್ಷಣಿಕ ವರ್ಷಕ್ಕೆ ₹1,500 ದಿಂದ ₹3,500 ರ ವರೆಗೆ
- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಒಂದು ಶೈಕ್ಷಣಿಕ ವರ್ಷಕ್ಕೆ ₹1,000 ದಿಂದ ₹2,500 ರ ವರೆಗೆ
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಆಧಾರದ ಮೇಲೆ ಒಂದು ಶೈಕ್ಷಣಿಕ ವರ್ಷಕ್ಕೆ ₹1,000 ದಿಂದ ₹5,000 ದ ವರೆಗೆ
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ:
- SC/ST ವಿದ್ಯಾರ್ಥಿಗಳಿಗೆ ಪೂರ್ಣ ಭೋದನಾ ಶುಲ್ಕ ಮರುಪಾವತಿ ಜೊತೆಗೆ ವರ್ಷಕ್ಕೆ ₹5,000 ದಿಂದ ₹12,000 ವರೆಗೆ ನಿರ್ವಹಣಾ ಭತ್ಯೆ ನೀಡಲಾಗುವುದು.
- ಹಿಂದುಳಿದ ವರ್ಗಗಳಿಗೆ ಪೂರ್ಣ ಭೋದನಾ ಶುಲ್ಕ ಮರುಪಾವತಿ ಜೊತೆಗೆ ವಿದ್ಯಾಸಿರಿ ಯೋಜನೆಯಡಿಯಲ್ಲಿ ವಸತಿ ನಿಲಯ ಸಿಗದಿದ್ದರೆ ವಾರ್ಷಿಕ ₹15,000 ವರೆಗೆ ನೀಡಲಾಗುವುದು.
- ಅಲ್ಪಸಂಖ್ಯಾತರ ವರ್ಗಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಆಧಾರದ ಮೇಲೆ ₹6,000 ದಿಂದ ₹30,000 ವರೆಗೆ ವಿದ್ಯಾರ್ಥಿವೇತನ ಲಭಿಸುತ್ತದೆ.
ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ:
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಈ ಕೆಳಕಂಡಂತಿದೆ,
- ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಗಳು ಸರ್ಕಾರಿ ಅಥವಾ ಮಾನ್ಯತೆ ಪಡೆದ ಅನುದಾನಿತ ಶಾಲೆಯಲ್ಲಿ ಓದುತ್ತಿರಬೇಕು.
- 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಅನ್ವಹಿಸುತ್ತದೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗ, ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳು, ಹಾಗೂ ಅಂಗವಿಕಲರಿಗೆ ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
- ವಿದ್ಯಾರ್ಥಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 75% ಹಾಜರಾತಿ ಹೊಂದಿರುವುದು ಕಡ್ಡಾಯ.
- ಕೆಲವು ವರ್ಗಗಳು ಈ ಕೆಳಗಿನ ಆದಾಯ ಮಿತಿಯನ್ನು ಮೀರಿರಬಾರದು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು – ₹2.5 ಲಕ್ಷ
- ಸಾಮಾನ್ಯಮತ್ತು ಅಲ್ಪಸಂಖ್ಯಾತರ ವರ್ಗಗಳು – ₹1 ಲಕ್ಷ
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಈ ಕೆಳಕಂಡಂತಿದೆ,
- ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 50% ಅಂಕವನ್ನು ಗಳಿಸಿರಬೇಕು.
- 11ನೇ ತರಗತಿ ಇಂದ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅನ್ವಹಿಸುತ್ತದೆ.
- ವಿದ್ಯಾರ್ಥಿಗಳು ಸರ್ಕಾರಿ ಅಥವಾ ಮಾನ್ಯತೆ ಪಡೆದ ಅನುದಾನಿತ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗ, ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳು, ಹಾಗೂ ಅಂಗವಿಕಲರಿಗೆ ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
- ಕೆಲವು ವರ್ಗಗಳು ಈ ಕೆಳಗಿನ ಆದಾಯ ಮಿತಿಯನ್ನು ಮೀರಿರಬಾರದು.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು – ₹2.5 ಲಕ್ಷ
- ಸಾಮಾನ್ಯಮತ್ತು ಅಲ್ಪಸಂಖ್ಯಾತರ ವರ್ಗಗಳು – ₹1- 2 ಲಕ್ಷ (ಕೆಲವು ಯೋಜನೆಗಳ ಪ್ರಕಾರ)
- ವಿದ್ಯಾರ್ಥಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 75% ಹಾಜರಾತಿ ಹೊಂದಿರುವುದು ಕಡ್ಡಾಯ.
ಅಗತ್ಯ ದಾಖಲೆಗಳು: Karnataka SSP Scholarship 2026
- ಕರ್ನಾಟಕ ನಿವಾಸ ಪ್ರಮಾಣ ಪತ್ರ
- ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಪತ್ರ
- ಪಾಸ್ ಬುಕ್
- ಪಾಸ್ಪೋರ್ಟ್ ಸೈಜ್ ಫೋಟೋ
- ಶುಲ್ಕ ರಶೀದಿ
- ಹಿಂದಿನ ವರ್ಷದ ಅಂಕಪಟ್ಟಿ
- ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು SATS ಐಡಿ ಹೊಂದಿರಬೇಕು.
- ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು SSLC ನೋಂದಣಿ ಸಂಖ್ಯೆ ಹಾಗೂ ಕಾಲೇಜು ನೋಂದಣಿ ಸಂಖ್ಯೆ ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
SSP ವಿದ್ಯಾರ್ಥಿವೇತನಕ್ಕೆ ಈ ಕೆಳಗಿನ ಹಂತಗಳ ಆಧಾರದ ಮೇಲೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
- ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವವರು, ಈ ಕೆಳಗೆ ನೀಡಿರುವ SSP ವಿದ್ಯಾರ್ಥಿವೇತನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಖಾತೆ ರಚಿಸಿ ಮೇಲೆ ಕ್ಲಿಕ್ ಮಾಡಿ.
- ಮೆಟ್ರಿಕ್ ಪೂರ್ವವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವವರು – https://ssp.karnataka.gov.in/
- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವವರು – https://ssp.postmatric.karnataka.gov.in/
- ಹೊಸ ಬಳಕೆದಾರರಾಗಿದ್ದರೆ, ಬಳಕೆದಾರರ ಐಡಿ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಆಗಿ
- ಅಲ್ಲಿ ಕೇಳಲಾದ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಅಪ್ಲೈ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ
- ಅರ್ಜಿ ಸಲ್ಲಿಸಿದ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.
ಅರ್ಜಿಸಲ್ಲಿಸಲು ಕೊನೆಯ ದಿನಾಂಕಗಳು: Karnataka SSP Scholarship 2026
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು
| ಇಲಾಖೆ | ಕೊನೆಯ ದಿನಾಂಕ |
| ಸಮಾಜ ಕಲ್ಯಾಣ ಇಲಾಖೆ | 28-02-2026 |
| ಬುಡಕಟ್ಟು ಕಲ್ಯಾಣ ಇಲಾಖೆ | 31-03-2026 |
| ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | 31-03-2026 |
| ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | 31-01-2026 |
| ತಾಂತ್ರಿಕ ಶಿಕ್ಷಣ ಇಲಾಖೆ | 31-03-2026 |
| ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ | 31-01-2026 |
| ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ | 31-03-2026 |
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು
| ಇಲಾಖೆ | ಕೊನೆಯ ದಿನಾಂಕ |
| ಸಮಾಜ ಕಲ್ಯಾಣ ಇಲಾಖೆ | 28-02-2026 |
| ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ | 15-02-2026 |
| ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | 31-01-2026 |
| ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | 31-01-2026 |
| ತಾಂತ್ರಿಕ ಶಿಕ್ಷಣ ಇಲಾಖೆ | 31-01-2026 |
| ವೈದ್ಯಕೀಯ ಶಿಕ್ಷಣ ಇಲಾಖೆ | 31-03-2026 |
| ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ | 31-01-2026 |
| ಕಾಲೇಜು ಶಿಕ್ಷಣ ಇಲಾಖೆ | 31-01-2026 |
| ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ | 31-01-2026 |
ತೀರ್ಮಾನ:-
ಕರ್ನಾಟಕ ಸರ್ಕಾರವು SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದ್ದು, ಅರ್ಜಿ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಮೇಲೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆದುಕೊಳ್ಳಿ. ನಿಮ್ಮ ಉನ್ನತ ಶಿಕ್ಷಣಕ್ಕೆ ಸರ್ಕಾರದ ಆರ್ಥಿಕ ನೆರವು ಹೆಚ್ಚಿನ ಸಹಕಾರವನ್ನು ನೀಡುತ್ತದೆ.

