ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಬಿಟ್ಟಿದ್ದಾರೆ, 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ತಿಂಗಳಿಗೆ 1 ಸಾವಿರ ಹಾಗೂ ವರ್ಷಕ್ಕೆ 12000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ, ಇದರ ಕುರಿತು ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶ
ರಾಷ್ಟ್ರೀಯ ಮೀನ್ಸ್ ಕಂ ಮೆರಿಟ್ ವಿದ್ಯಾರ್ಥಿ ವೇತನ ಯೋಜನೆಗೆ ಭಾರತ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಶಿಕ್ಷಣ ಸಚಿವಾಲಯದಿಂದ ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆವರಿಸಲಾಗಿದೆ, ಇದರ ಉದ್ದೇಶ ಆರ್ಥಿಕವಾಗಿ ದುರ್ಬಲ ವರ್ಗಗಳಲ್ಲಿ ಬರುವ ಅಂದರೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಂಟನೇ ತರಗತಿಯ ನಂತರ ಶಾಲಾ ಶಿಕ್ಷಣವನ್ನ ಬಿಡಬಾರದು ಎನ್ನುವಂತ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
9ನೇ ತರಗತಿಯಿಂದ 12ನೇ ತರಗತಿಯವರೆಗೆ ಅಧ್ಯಯನ ಮುಂದುವರಿಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತಂದು ತಿಂಗಳಿಗೆ 1ಸಾವಿರದಂತೆ ವರ್ಷಕ್ಕೆ 12 ಸಾವಿರ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಮಾನದಂಡಗಳು
-
- ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
- ವಿದ್ಯಾರ್ಥಿಯು ಸರ್ಕಾರಿ ಶಾಲೆ ಅನುದಾನಿತ ಶಾಲೆ ಅಥವಾ ಸ್ಥಳೀಯ ಸಂಸ್ಥೆಯ ಶಾಲೆಯಲ್ಲಿ ಓದುತ್ತಿರಬೇಕು
- ಖಾಸಗಿ ಶಾಲೆಗಳು ಕೇಂದ್ರೀಯ ವಿದ್ಯಾಲಯಗಳು ನವೋದಯ ಶಾಲೆಗಳು ರಾಜ್ಯ / ಕೇಂದ್ರ ಸರ್ಕಾರ ನಡೆಸುವ ವಸತಿ ಶಾಲೆಗಳು ಮತ್ತು ಖಾಸಗಿ ವಸತಿ ಶಾಲೆಗಳ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಲ್ಲ
- ಪೋಷಕರ ವಾರ್ಷಿಕ ಆದಾಯ 3.5 ಲಕ್ಷಕ್ಕಿಂತ ಕಡಿಮೆ ಇರಬೇಕು
- 7ನೇ ತರಗತಿಯಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಕನಿಷ್ಠ 55% ಅಂಕಗಳನ್ನ ಹೊಂದಿರಬೇಕು
- ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಕನಿಷ್ಠ 50% ಅಂಕಗಳನ್ನು ಗಳಿಸಬೇಕು
- ವಿದ್ಯಾರ್ಥಿ ವೇತನವನ್ನು 9ನೇ ತರಗತಿಯಿಂದ 12ನೇ ತರಗತಿಯವರೆಗೆ ಒಟ್ಟು ನಾಲ್ಕು ವರ್ಷಗಳ ಕಾಲ ನೀಡಲಾಗುತ್ತದೆ.
- ವಿದ್ಯಾರ್ಥಿಯು 9ನೇ 10ನೇ ಮತ್ತು 11ನೇ ತರಗತಿಯನ್ನು ಒಂದೇ ಯತ್ನದಲ್ಲಿ ಉತ್ತೀರ್ಣರಾಗಿರಬೇಕು
- 9ನೇ ಮತ್ತು 11ನೇ ತರಗತಿಯಲ್ಲಿ ಕನಿಷ್ಠ 55% ಅಂಕವನ್ನ ಹೊಂದಿರಬೇಕು
- 10ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ 60 ಪರ್ಸೆಂಟ್ ಅಂಕವನ್ನು ಪಡೆದಿರಬೇಕು
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
-
- ಹಿಂದಿನ ವರ್ಷದ ಅಂಕಪಟ್ಟಿ
- ಶಾಲಾ ದಾಖಲಾತಿ
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಇನ್ನಿತರ ಅಗತ್ಯ ದಾಖಲೆಗಳು.
ವಿದ್ಯಾರ್ಥಿ ವೇತನದ ಮೊತ್ತ
- ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 12000 ಅಂದರೆ ಪ್ರತಿ ತಿಂಗಳು 1000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ
- ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಅಕೌಂಟ್ ಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತೆ
ಅರ್ಹರಲ್ಲದ ವಿದ್ಯಾರ್ಥಿಗಳು
-
- ಖಾಸಗಿ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳು
- ಕೇಂದ್ರೀಯ ವಿದ್ಯಾಲಯಗಳು ಮತ್ತುಜವಹರಲಾಲ್ ನೆಹರು ನವೋದಯ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು
- ಹಾಗೆ ರಾಜ್ಯ ಸರ್ಕಾರಿ ಸಂಸ್ಥೆಗಳು ನಡೆಸುವಂತ ವಸತಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರಲ್ಲ
ಆಯ್ಕೆ ಪ್ರಕ್ರಿಯೆ
ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಕನಿಷ್ಠ 40% ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಕನಿಷ್ಠ 32% ಅಂಕಗಳನ್ನು ಗಳಿಸಿರುವಂತಹ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ
ಪ್ರತಿ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ಮೀಸಲಾತಿ ಪ್ರಮಾಣ ಮತ್ತು ಅರ್ಹತೆ ನಿಯಮಗಳ ಆಧಾರದ ಮೇಲೆ ಅಂತಿಮ ಆಯ್ಕೆಯನ್ನು ನಡೆಸಲಾಗುತ್ತದೆ
ಆಯ್ಕೆದ ವಿದ್ಯಾರ್ಥಿಗಳು ನಂತರ ವಿದ್ಯಾರ್ಥಿ ವೇತನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸಬೇಕಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ
-
- ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
- ಲಾಗಿನ್ ಆಗಿ ಕೊಟ್ಟಿರುವ ಮಾಹಿತಿಯನ್ನು ಭರ್ತಿ ಮಾಡಿ
- ಕೇಳಲಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ
- ನಂತರ ಬಂದಿರುವಂತಹ ದಾಖಲೆಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ
ಪ್ರಮುಖ ಲಿಂಕುಗಳು
ಅಂತಿಮ ತೀರ್ಮಾನ
ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸುವರ್ಣ ಅವಕಾಶವಾಗಿದ್ದು ಆರ್ಥಿಕವಾಗಿ ದುರ್ಬಲವಾದ ವರ್ಗದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.