SBI CBO : ರೂ ₹48,480/- ಪದವೀಧರರಿಗೆ ಭರ್ಜರಿ ಉದ್ಯೋಗಾವಕಾಶ! 2273 CBO ಹುದ್ದೆಗಳು | ಈಗಲೇ ಅರ್ಜಿ ಸಲ್ಲಿಸಿ!

SBI CBO Recruitment 2026 in Kannada

SBI CBO : ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡುವ ಕನಸ್ಸನ್ನು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ CBO ನೇಮಕಾತಿ 2026 (SBI CBO) ರಲ್ಲಿ ಒಟ್ಟು 2273 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ.

SBI CBO Recruitment 2026 in Kannada

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO), ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಅಂದರೆ 29-01-2026 ರಿಂದಲೇ ಆರಂಭಗೊಂಡಿದ್ದು, 18-02-2026 ರಂದು ಕೊನೆಗೊಳ್ಳಲಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಕೇವಲ ಒಂದು ರಾಜ್ಯಕ್ಕೆ ಮಾತ್ರ ಸೀಮಿತವಾಗಿರದೆ, ಭಾರತದಾದ್ಯಂತ ಎಲ್ಲಾ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವೇನಾದರೂ ಉದ್ಯೋಗ ಹುಡುಕುತ್ತಿದ್ದರೆ ಈ ಅವಕಾಶ ಮಿಸ್ ಮಾಡ್ಕೋಬೇಡಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗಿನ ಹಂತದಲ್ಲಿ ನೀಡಲಾಗಿದೆ, ಈ ಎಲ್ಲಾ ಮಾಹಿತಿಯನ್ನು ಓದಿಕೊಳ್ಳಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಕನ್ನಡ ಹೆಲ್ಪ್ ವೆಬ್ಸೈಟ್ ಬೆಸ್ಟ್ ಆಯ್ಕೆ.

ಹುದ್ದೆಯ ಅವಲೋಕನ:

ಸಂಸ್ಥೆಯ ಹೆಸರುಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO)
ಹುದ್ದೆಯ ಹೆಸರುಸರ್ಕಲ್ ಬೇಸ್ಡ್ ಆಫೀಸರ್
ಹುದ್ದೆಯ ಸಂಖ್ಯೆ2273
ಅರ್ಹತೆಯಾವುದೇ ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18-02-2026
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ವಿಮರ್ಶೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ಒಟ್ಟು 2273 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು,21 ರಿಂದ 30 ವರ್ಷ ವಯೋಮಿತಿ ಹೊಂದಿರುವ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 2273 ಹುದ್ದೆಗಳಲ್ಲಿ, 2,050 ನಿಯಮಿತ ಹುದ್ದೆಗಳು ಹಾಗೂ 223 ಬ್ಯಾಕ್ ಲಾಗ್ ಹುದ್ದೆಗಳಾಗಿ ವಿಂಗಡಿಸಲಾಗಿದೆ. ರಾಜ್ಯವಾರು ಎಷ್ಟೆಷ್ಟು ಹುದ್ದೆಗಳು ಹಂಚಿಕೆಯಾಗಿದೆ ಎಂದು ಕೆಳಗಿನ ಹಂತದಲ್ಲಿ ತಿಳಿಯೋಣ.

ಹುದ್ದೆಗಳ ವಿವರ:

ವೃತ್ತ ಕೇಂದ್ರಾಡಳಿತ ಪ್ರದೇಶ ಭಾಷೆ ಒಟ್ಟು ಹುದ್ದೆಗಳು
ಬೆಂಗಳೂರು ಕರ್ನಾಟಕ ಕನ್ನಡ 211 ಹುದ್ದೆಗಳು
ಭೋಪಾಲ್ ಮಧ್ಯಪ್ರದೇಶ, ಛತ್ತೀಸ್ಗಢ ಹಿಂದಿ 114 ಹುದ್ದೆಗಳು
ಭುವನೇಶ್ವರ ಒಡಿಶಾ ಒಡಿಶಾ 81 ಹುದ್ದೆಗಳು
ಚನ್ನೈತಮಿಳುನಾಡು, ಪುದುಚೇರಿ ತಮಿಳು 202 ಹುದ್ದೆಗಳು
ಚಂಡೀಗಢ ಹರಿಯಾಣ, ಪಂಜಾಬ್, ಲಡಾಖ್, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಿಂದಿ, ಪಂಜಾಬ್, ಉರ್ದು 107 ಹುದ್ದೆಗಳು
ಅಮರಾವತಿ ಆಂಧ್ರಪ್ರದೇಶ ತೆಲುಗು/ಉರ್ದು 98 ಹುದ್ದೆಗಳು
ಜೈಪುರ ರಾಜಸ್ಥಾನಹಿಂದಿ 104 ಹುದ್ದೆಗಳು
ಹೈದರಾಬಾದ್ ತೆಲಂಗಾಣ ತೆಲುಗು 68 ಹುದ್ದೆಗಳು
ಗುವಾಹಟಿ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಮಿಜೋರಾಂ, ಮೇಘಾಲಾಂಡ್, ತ್ರಿಪುರ, ನಾಗಾಲ್ಯಾಂಡ್ ಅಸ್ಸಾಮಿ/ಮಣಿಪುರಿ/ಬಂಗಾಳಿ ಇತ್ಯಾದಿ 79 ಹುದ್ದೆಗಳು
ಲಕ್ನೋ ಉತ್ತರಪ್ರದೇಶ ಹಿಂದಿ/ಉರ್ದು 220 ಹುದ್ದೆಗಳು
ನವ ದೆಹಲಿ ದೆಹಲಿ/ಉತ್ತರಾಖಂಡಹಿಂದಿ 82 ಹುದ್ದೆಗಳು
ಮಹಾರಾಷ್ಟ್ರ ಮಹಾರಾಷ್ಟ್ರ ಮರಾಠಿ 204 ಹುದ್ದೆಗಳು
ಮುಂಬೈ ಮಹಾರಾಷ್ಟ್ರ/ ಗೋವಾ ಮರಾಠಿ ಕೊಂಕಣಿ 145 ಹುದ್ದೆಗಳು
ತಿರುವನಂತಪುರಂ ಲಕ್ಷದ್ವೀಪ/ ಕೇರಳ ಮಲೆಯಾಳಂ 79 ಹುದ್ದೆಗಳು
ಗಾಂಧಿನಗರ ಗುಜರಾತ್, ದಿಯು – ದಮನ್, ದಾದ್ರಾ, ನಗರ ಹವೇಲಿ, ಗುಜರಾತಿ 236 ಹುದ್ದೆಗಳು
ಕೋಲ್ಕತ್ತಾ ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್, ಸಿಕ್ಕಿಂ, ಬಂಗಾಳಿ/ ನೇಪಾಳ 231 ಹುದ್ದೆಗಳು

ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ:

1. ಶೈಕ್ಷಣಿಕ ಅರ್ಹತೆ:

  • ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಚಾರ್ಟರ್ಡ್ ಅಕೌಂಟೆಂಟ್, ವೈದ್ಯಕೀಯ, ಇಂಜಿನಿಯರಿಂಗ್ ಪದವಿ ಹಾಗೂ ಮುಂತಾದ ಸಮಾನ ಅರ್ಹತೆ ಪಡೆದ ಅಭ್ಯರ್ಥಿಗಳು ಸಹ ಅರ್ಹರಾಗಿರುತ್ತಾರೆ.

2. ವೃತ್ತಿ ಅನುಭವ:

  • ಯಾವುದೇ ಪ್ರಾದೇಶಿಕ ಅಥವಾ ವಾಣಿಜ್ಯ ಬ್ಯಾಂಕ್ ಗಳಲ್ಲಿ ಅಧಿಕಾರಿಯಾಗಿ 2 ವರ್ಷ ವೃತ್ತಿ ಅನುಭವ ಹೊಂದಿರಬೇಕು.

3. ಭಾಷಾ ಪ್ರಾವೀಣ್ಯತೆ:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ರಾಜ್ಯದ ಸ್ಥಳೀಯ ಭಾಷೆಗಳಲ್ಲಿ ಯಾವುದಾದರೊಂದು ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಅಭ್ಯರ್ಥಿಗಳ ವಯಸ್ಸಿನ ಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 31-12-2025 ರಂತೆ,

  • ಕನಿಷ್ಠ ವಯಸ್ಸಿನ ಮಿತಿ: 21 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 31 ವರ್ಷಗಳು ಇರಬೇಕು.

ವಯೋಮಿತಿ ಸಡಿಲಿಕೆ:

ಕೆಲವು ವರ್ಗಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ, ಅದನ್ನು ಈ ಕೆಳಗೆ ನೋಡಬಹುದಾಗಿದೆ,

  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
  • ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಅಭ್ಯರ್ಥಿಗಳಿಗೆ: 5 ವರ್ಷ
  • ಪಿಡಬ್ಲ್ಯೂಬಿಡಿ (ಸಾಮಾನ್ಯ, EWS) ಅಭ್ಯರ್ಥಿಗಳಿಗೆ: 10 ವರ್ಷ
  • ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
  • ಪಿಡಬ್ಲ್ಯೂಬಿಡಿ (SC/ST) ಅಭ್ಯರ್ಥಿಗಳಿಗೆ: 15 ವರ್ಷ

ವೇತನ ಶ್ರೇಣಿ:

ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗೆ ತಿಂಗಳ ಆರಂಭಿಕ ಮೂಲ ವೇತನ ₹48,480/- ನೀಡಲಾಗುತ್ತದೆ. ಜೊತೆಗೆ ಮೊದಲೇ 2 ವರ್ಷ ವೃತ್ತಿ ಅನುಭವ ಹೊಂದಿರುವುದರಿಂದ 2 ಮುಂಗಡ ಇಂಕ್ರಿಮೆಂಟ್ ಸಹ ಪಡೆದುಕೊಳ್ಳಬಹುದು.

ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ ಹಾಗೂ ಇತರ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ:

ವರ್ಗ ಒಟ್ಟು ಅರ್ಜಿ ಶುಲ್ಕ
ಸಾಮಾನ್ಯ, ಇತರ ಹಿಂದುಳಿದ ವರ್ಗ (ಒಬಿಸಿ), ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ₹750/-
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಲಾಗಿರುವ ಪ್ರಕ್ರಿಯೆಗಳ ಮೂಲಕ ಆಯ್ಕೆ ಮಾಡಲಾಗುವುದು.

  • ಆನ್‌ಲೈನ್ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ಸಂದರ್ಶನ
  • ಸ್ಥಳೀಯ ಭಾಷಾ ಪ್ರಾವಿಣ್ಯತೆ ಪರೀಕ್ಷೆ
ಇಲ್ಲಿ ಗಮನಿಸಿ: “ಅಭ್ಯರ್ಥಿಗಳು ತಾವು ಆಯ್ಕೆ ಮಡಿದ ಸ್ಥಳೀಯ ಭಾಷೆಗಳಲ್ಲಿ 10 ಅಥವಾ 12 ನೇ ತರಗತಿಯಲ್ಲಿ ಅಧ್ಯಯನ ಮಾಡಿದ್ದರೆ, ಪುನಃ ಭಾಷಾ ಪ್ರಾವೀಣ್ಯತೆ ಪರೀಕ್ಷೆಗೆ ಒಳಪಡುವ ಅಗತ್ಯವಿಲ್ಲ.”

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು:

  • ಅಭ್ಯರ್ಥಿಗಳು SBI (SBI CBO)ಅಧಿಕೃತ ವೆಬ್ಸೈಟ್ https://sbi.bank.in/ ಗೆ ಭೇಟಿ ನೀಡಿ
  • ಹೊಸ ಬಳಕೆದಾರರಾಗಿದ್ದರೆ, ನೋಂದಣಿ ಸಂಖ್ಯೆ ಹಾಗೂ ಪಾಸ್ ವರ್ಡ್ ಬಳಸಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  • ವೃತ್ತಿ ವಿಭಾಗವನ್ನು ಕ್ಲಿಕ್ ಮಾಡಿ ಅರ್ಜಿ ಫಾರ್ಮ್ ಓಪನ್ ಆಗುತ್ತದೆ.
  • ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ.
  • ನಂತರ ಅರ್ಜಿ ಫಾರ್ಮ್ ನಲ್ಲಿ ಕೇಳಲಾದ ಸ್ವ ವಿವರ ಹಾಗೂ ಅಗತ್ಯ ವಿವರವನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಮತ್ತು ನಿಮ್ಮ ವರ್ಗಕ್ಕೆ ಅನ್ವಹಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.
  • ಈ ಎಲ್ಲಾ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಹುದ್ದೆಗೆ ಸಂಭಂದಿಸಿದ ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ 29-01-2026
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18-02-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 18-02-2026
ಆನ್ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ ಮಾರ್ಚ್ 2026

ಅಧಿಕೃತ ಲಿಂಕುಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತ ಪಡಿಸಿಕೊಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮತ್ತು ನಿಮ್ಮ ವರ್ಗಕ್ಕೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ತಪ್ಪದೆ ಪಾವತಿಸಿ.

ಆನ್ಲೈನ್ ಪರೀಕ್ಷೆಯ ದಿನಾಂಕವನ್ನು 2026 ರ ಮಾರ್ಚ್ ತಿಂಗಳಲ್ಲಿ ನಿಗದಿಪಡಿಸಿದ್ದು, ಇದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ದಿನಾಂಕ ನಿಗದಿಪಡಿಸಿರುವ ಬಗ್ಗೆ ಪರಿಶೀಲಿಸುತ್ತಿರಿ. ಅರ್ಹ ಉದ್ಯೋಗಾಕಾಂಕ್ಷಿಗಳು ತಪ್ಪದೆ ಈ ಸುವರ್ಣಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಇತರೆ ಸರ್ಕಾರಿ ಹುದ್ದೆಗಳ ಲಿಂಕುಗಳು :

Leave a Reply

Your email address will not be published. Required fields are marked *