SSP Scholarship- ₹13,500/- ವಿದ್ಯಾರ್ಥಿವೇತನ ಅರ್ಜಿ : ದಿನಾಂಕ ವಿಸ್ತರಣೆ!

SSP Scholarship

ವಿದ್ಯಾರ್ಥಿಗಳೇ, ಸರ್ವರ್ ಸಮಸ್ಯೆಯಿಂದ ನೀವು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲವೇ? ಈ ವರ್ಷದ ಸ್ಕಾಲರ್ಷಿಪ್ ಹಣ ಮಿಸ್ ಆಯಿತು ಅಂತ ಚಿಂತೆ ಮಾಡ್ತಿದೀರಾ? ಹಾಗಿದ್ದರೆ ಇನ್ನು ಈ ವಿಷಯದ ಕುರಿತು ಚಿಂತಿಸುವ ಅಗತ್ಯವಿಲ್ಲ. ರಾಜ್ಯ ಸರ್ಕಾರವು 2026 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ SSP ಸ್ಕಾಲರ್ಷಿಪ್ (SSP Scholarship) ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದ್ದು, ಇನ್ನೂ ಕೂಡ SSP ಸ್ಕಾಲರ್ಷಿಪ್ (SSP Scholarship)ಗೆ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ಇನ್ನೊಂದು ಅವಕಾಶ.

SSP Scholarship in kannada information

ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು SSP ಸ್ಕಾಲರ್ಷಿಪ್ (SSP Scholarship)ಗೆ ಅರ್ಜಿ ಸಲ್ಲಿಸಿದ್ದು, ಅವರ ಬ್ಯಾಂಕ್ ಖಾತೆಗೆ ವಿದ್ಯಾರ್ಥಿವೇತನದ ಹಣ ಜಮಾ ಆಗಿದೆ. ನೀವು ಕೂಡ ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿವೇತನದಿಂದ ಬರುವ ಹಣವನ್ನು ಉತ್ತಮ ಶಿಕ್ಷಣವನ್ನು ಪಡೆಯಲು ಉಪಯೋಗಿಸಿಕೊಳ್ಳಿ.

ವಿದ್ಯಾರ್ಥಿಗಳು SSP ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು, ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕವನ್ನು ಹಾಗೂ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಮಾಹಿತಿಯನ್ನು ಕೆಳಗಿನ ಹಂತದಲ್ಲಿ ನೀಡಲಾಗಿದ್ದು, ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉಪಯುಕ್ತವಾಗುವ ಇನ್ನಷ್ಟು ವಿಷಯಗಳ ಬಗ್ಗೆ ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಕನ್ನಡ ಹೆಲ್ಪ್ ಗೆ ಭೇಟಿ ನೀಡಿ.

ವಿದ್ಯಾರ್ಥಿವೇತನದ ಬಗ್ಗೆ:

ಅಧಿಕೃತ ಪೋರ್ಟಲ್ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (SSP Scholarship)
ಫಲಾನುಭವಿಗಳುಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್
ಶೈಕ್ಷಣಿಕ ವರ್ಷ2025-26

ವಿದ್ಯಾರ್ಥಿವೇತನದ ಕುರಿತು:

ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು SSP ವಿದ್ಯಾರ್ಥಿವೇತನವನ್ನು (SSP Scholarship)ನೀಡುತ್ತಿದ್ದು, 2025-26 ನೇ ಶೈಕ್ಷಣಿಕ ವರ್ಷದಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ತಾಂತ್ರಿಕ ಸಮಸ್ಯೆಯಿಂದ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದೆ.

ಈ ಕೆಳಗಿನ ಹಂತದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನೀಡಲಾಗಿದ್ದು, ನೀವು ಯಾವ ಇಲಾಖೆಗೆ ಒಳಪಡುತ್ತೀರಿ ಎಂದು ತಿಳಿದುಕೊಂಡು ಆ ಇಲಾಖೆ ನಿಗದಿ ಪಡಿಸಿರುವ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ.

ವಿದ್ಯಾರ್ಥಿವೇತನ ನೀಡುವ ಮೂಲ ಉದ್ದೇಶ:

  • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಿ ಅವರ ಶಿಕ್ಷಣಮಟ್ಟವನ್ನು ಸುಧಾರಿಸುವುದು.
  • ಉನ್ನತ ಮಟ್ಟದ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು.
  • ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು.
  • ವಿದ್ಯಾರ್ಥಿಗಳು ಕಚೇರಿಗಳಿಗೆ ಅಲೆದಾಡದೆ ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಲು ಅವಕಾಶ.
  • ಶಿಕ್ಷಣದಿಂದ ವಂಚಿತರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಸುಧಾರಣೆ ಮಾಡುವುದು.
  • ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೂ ಸಮಾನ ಶೈಕ್ಷಣಿಕ ಅವಕಾಶ.

SSP ವಿದ್ಯಾರ್ಥಿವೇತನದಿಂದ ಸಿಗುವ ಪ್ರಯೋಜನಗಳು:

ವಿದ್ಯಾರ್ಥಿವೇತನದ ಒಟ್ಟು ಮೊತ್ತ:

1. PUC ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:

ಪ್ರಥಮ ಹಾಗೂ ದ್ವಿತೀಯ PUC ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೆಳಕಂಡ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

  • ಮನೆಯಿಂದ ಕಾಲೇಜಿಗೆ ಹೋಗುವ (ಡೇ- ಸ್ಕಾಲರ್) ವಿದ್ಯಾರ್ಥಿಗಳಿಗೆ: ₹2,500
  • ಸರ್ಕಾರಿ ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳಿಗೆ: ₹4,000

2. ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:

B.E, B.Tech, MBBS, B.VSc ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೆಳಕಂಡ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

  • ಮನೆಯಿಂದ ಕಾಲೇಜಿಗೆ ಹೋಗುವ (ಡೇ- ಸ್ಕಾಲರ್) ವಿದ್ಯಾರ್ಥಿಗಳಿಗೆ: ₹7,000
  • ಸರ್ಕಾರಿ ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳಿಗೆ: ₹13,500

3. ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:

Law, Diploma, ನರ್ಸಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೆಳಕಂಡ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

  • ಮನೆಯಿಂದ ಕಾಲೇಜಿಗೆ ಹೋಗುವ (ಡೇ- ಸ್ಕಾಲರ್) ವಿದ್ಯಾರ್ಥಿಗಳಿಗೆ: ₹6,500
  • ಸರ್ಕಾರಿ ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳಿಗೆ: ₹9,500

4. ಸಾಮಾನ್ಯ ಪದವಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:

BA, B.Com, B.BA, B.Sc, ITI ನಂತಹ ಸಾಮಾನ್ಯ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೆಳಕಂಡ ವಿದ್ಯಾರ್ಥಿವೇತನ ನೀಡಲಾಗುವುದು.

  • ಮನೆಯಿಂದ ಕಾಲೇಜಿಗೆ ಹೋಗುವ (ಡೇ- ಸ್ಕಾಲರ್) ವಿದ್ಯಾರ್ಥಿಗಳಿಗೆ: ₹3,000
  • ಸರ್ಕಾರಿ ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳಿಗೆ: ₹6,000

ಇತರೆ ಸೌಲಭ್ಯಗಳು:

  • SC/ST ಹಾಗೂ OBC ವಿದ್ಯಾರ್ಥಿಗಳಿಗೆ ಪೂರ್ಣ ಭೋದನಾ ಶುಲ್ಕ ಮರುಪಾವತಿ ಜೊತೆಗೆ ನಿರ್ವಹಣಾ ಭತ್ಯೆ ನೀಡಲಾಗುವುದು.
  • ವಿದ್ಯಾಸಿರಿ ಯೋಜನೆಯಡಿಯಲ್ಲಿ ವಸತಿ ನಿಲಯ ಸಿಗದಿದ್ದರೆ ವಾರ್ಷಿಕ ₹15,000 ವರೆಗೆ ನೀಡಲಾಗುವುದು.

ವಿದ್ಯಾರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ:

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಗಳು ಸರ್ಕಾರಿ ಅಥವಾ ಮಾನ್ಯತೆ ಪಡೆದ ಅನುದಾನಿತ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗ, ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳು, ಹಾಗೂ ಅಂಗವಿಕಲರಿಗೆ ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
  • ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 50% ಅಂಕವನ್ನು ಗಳಿಸಿರಬೇಕು.
  • ವಿದ್ಯಾರ್ಥಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 75% ಹಾಜರಾತಿ ಹೊಂದಿರುವುದು ಕಡ್ಡಾಯ.
  • ಕೆಲವು ವರ್ಗಗಳು ಈ ಕೆಳಗಿನ ಆದಾಯ ಮಿತಿಯನ್ನು ಮೀರಿರಬಾರದು.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು – ₹2.5 ಲಕ್ಷ
  • ಸಾಮಾನ್ಯ ಮತ್ತು ಅಲ್ಪಸಂಖ್ಯಾತರ ವರ್ಗಗಳು – ₹1- 2 ಲಕ್ಷ (ಕೆಲವು ಯೋಜನೆಗಳ ಪ್ರಕಾರ)

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್
  • ಶೈಕ್ಷಣಿಕ ಪ್ರಮಾಣ ಪತ್ರ
  • ಹಿಂದಿನ ವರ್ಷದ ಅಂಕಪಟ್ಟಿ
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕರ್ನಾಟಕ ನಿವಾಸ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಪಾಸ್ಪೋರ್ಟ್ ಸೈಜ್ ಫೋಟೋ
  • ಶುಲ್ಕ ಪಾವತಿಯ ರಶೀದಿ

ಅರ್ಜಿ ಸಲ್ಲಿಸುವ ವಿಧಾನ:

(SSP Scholarship)ವಿದ್ಯಾರ್ಥಿವೇತನಕ್ಕೆ ಈ ಕೆಳಗಿನ ಹಂತಗಳ ಆಧಾರದ ಮೇಲೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

  • SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು, (SSP Scholarship)ವಿದ್ಯಾರ್ಥಿವೇತನ ಅಧಿಕೃತ ವೆಬ್ಸೈಟ್ https://ssp.karnataka.gov.in/ ಗೆ ಭೇಟಿ ನೀಡಿ ಖಾತೆ ರಚಿಸಿ ಮೇಲೆ ಕ್ಲಿಕ್ ಮಾಡಿ.
  • ಹೊಸ ಬಳಕೆದಾರರಾಗಿದ್ದರೆ, ಬಳಕೆದಾರರ ಐಡಿ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಆಗಿ
  • ಅಲ್ಲಿ ಕೇಳಲಾದ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.
ನನ್ನದೊಂದು ಮನವಿ: “ವಿದ್ಯಾರ್ಥಿಗಳೇ, SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರವೇ ಇನ್ನೊಂದು ಅವಕಾಶವನ್ನು ಕಲ್ಪಿಸಿದ್ದು, ಅರ್ಜಿ ಸಲ್ಲಿಸಲು ಇನ್ನು ಕೇವಲ 8 ದಿನಗಳಷ್ಟೇ ಬಾಕಿ ಉಳಿದಿದೆ. ಕೊನೆಯ ಹಂತದಲ್ಲಿ ಸರ್ವರ್ ಬಿಸಿ ಹಾಗೂ ಇನ್ನಿತ ತಾಂತ್ರಿಕ ಸಮಸ್ಯೆಗಳು ಎದುರಾಗಬಹುದು.ಹಾಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವರೆಗೂ ಕಾಯದೆ ಸಿಕ್ಕಿರುವ ಅವಕಾಶವನ್ನು ಈಗಲೇ ಸದುಪಯೋಗ ಪಡಿಸಿಕೊಳ್ಳಿ.”

ವಿಸ್ತರಣೆ ಮಾಡಿದ ದಿನಾಂಕಗಳ ವಿವರ:

ಇಲಾಖೆಕೊನೆಯ ದಿನಾಂಕ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ15-02-2026
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ 15-02-2026
ಸಮಾಜ ಕಲ್ಯಾಣ ಇಲಾಖೆ28-02-2026
ತಾಂತ್ರಿಕ ಶಿಕ್ಷಣ ಇಲಾಖೆ28-02-2026
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 28-02-2026
ಆರ್ಯ ವೈಶ್ಯ ಇಲಾಖೆ 28-02-2026
ವೈದ್ಯಕೀಯ ಶಿಕ್ಷಣ ಇಲಾಖೆ31-03-2026

ತೀರ್ಮಾನ:-

ರಾಜ್ಯ ಸರ್ಕಾರವು SSP ವಿದ್ಯಾರ್ಥಿವೇತನದ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಾಯಧನವನ್ನು ನೀಡುತ್ತಿದ್ದು, ತಾಂತ್ರಿಕ ಸಮಸ್ಯೆಯಿಂದ, ಸರ್ವರ್ ಬ್ಯುಸಿ ಇರುವುದರಿಂದ ರಾಜ್ಯದ ಸಾಕಷ್ಟು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವುದನ್ನು ಗಮನಿಸಿದ ಸರ್ಕಾರವು ಇಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ. ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಇನ್ನೊಂದು ಬಾರಿ ವಿಸ್ತರಣೆ ಮಾಡುವುದಿಲ್ಲ.


ಇತರೆ ಪ್ರಮೂಖ ಲಿಂಕುಗಳು:

One thought on “SSP Scholarship- ₹13,500/- ವಿದ್ಯಾರ್ಥಿವೇತನ ಅರ್ಜಿ : ದಿನಾಂಕ ವಿಸ್ತರಣೆ!

Leave a Reply

Your email address will not be published. Required fields are marked *